Uncategorized

ಮಡಿಕೇರಿ: ನಕ್ಷತ್ರ ಆಮೆ ಮಾರಾಟಕ್ಕೆ ಯತ್ನ,ಇಬ್ಬರು ಅರೆಸ್ಟ್

ಮಡಿಕೇರಿ: ಅಪರೂಪದ ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಕದ್ದು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ಘಟಕ ಬಂಧಿಸಿದೆ. ಟಿ.ವಿ.ಕೃಷ್ಣ, ದರ್ಶನ್ ಬಂಧಿತ ಆರೋಪಿಗಳಾಗಿದ್ದಾರೆ.

ಒಂದು ಜೀವಂತ ಆಮೆಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಗುಡ್ಡೆ ಹೊಸೂರು ರಸ್ತೆಯ ಬಳಿ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯಿದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Related posts

ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಅರೆಸ್ಟ್‌

ಜೆಡಿಎಸ್‌ ಅಧಿಕಾರಕ್ಕೆ ಬಂದ್ರೆ ಗೋಮಾಂಸ ಮುಕ್ತ ವ್ಯಾಪಾರಕ್ಕೆ ಅವಕಾಶ

ಕನಕಮಜಲು: ಚಿನ್ನಾಭರಣ ಕಳವಾದ ಮನೆಗೆ ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ ಭೇಟಿ, ಆರೋಪಿಗಳ ಶೀಘ್ರ ಬಂಧನಕ್ಕೆ ಪೊಲೀಸ್ ಇಲಾಖೆಗೆ ಸೂಚನೆ