ಕರಾವಳಿಕೊಡಗುಸುಳ್ಯ

ಮಡಿಕೇರಿ:ಕಾಡಾನೆ ದಾಳಿಗೊಳಗಾಗಿ ಗಂಭೀರ ಗಾಯಗೊಂಡಿದ್ದ ತೋಟದ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತ್ಯು

ನ್ಯೂಸ್ ನಾಟೌಟ್ : ಮೂರು ದಿನಗಳ ಹಿಂದೆ  ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡು ಮೈಸೂರು ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡಿಯುತ್ತಿದ್ದ ಪಾಲಿಬೆಟ್ಟದ ಕಾರ್ಮಿಕ ಬಾಬಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ವಿಷಯ ತಿಳಿದ  ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಮೃತ  ಸಂಬಂಧಿಕರಿಗೆ ದೂರವಾಣಿ ಕರೆ ಮೂಲಕ ಸಾಂತ್ವನ ಹೇಳಿ ಸ್ಥಳದಲ್ಲಿದ್ದ ಅರಣ್ಯ ಅಧಿಕಾರಿಗಳಿಗೆ ತಕ್ಷಣ ಪರಿಹಾರ ನೀಡುವಂತೆ ಸೂಚಿಸಿದ್ದಾರೆ.ಶಾಸಕ ಪೊನ್ನಣ್ಣ ಅವರ ನಿರ್ದೇಶನದಂತೆ  ಕಾಂಗ್ರೆಸ್ ರಾಜ್ಯ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ಮೈಸೂರು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ಮೃತರ ಅಂತಿಮ ದರ್ಶನ ಪಡೆದರು.

ಕೊಡಗಿನ ಪಾಲಿಬೆಟ್ಟ ಮಸ್ಕಲ್ ಎಸ್ಟೇಟ್ ನ ತೋಟದ ಕಾರ್ಮಿಕರೊಬ್ಬರಿಗೆ ಕಾಡಾನೆ ದಾಳಿ ನಡೆಸಿತ್ತು. ಗಂಭೀರ ಗಾಯಗೊಂಡಿದ್ದ ಅವರನ್ನು ಅಮ್ಮತ್ತಿ ಖಾಸಗಿ ಆಸ್ಪತ್ರೆ ಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Related posts

ಮೇ.8 ರಂದು ಚಿತ್ರನಟಿ ರಮ್ಯಾ ಪುತ್ತೂರಿಗೆ

ವಕೀಲರ ವಿರುದ್ಧ ಪೊಲೀಸ್‌ ದೌರ್ಜನ್ಯ ಆರೋಪ, ವಕೀಲರ ಸಂಘ ಆಕ್ರೋಶ

ಒಕ್ಕಲಿಗರ ಸಂಘಕ್ಕೆ ನಡೆಯುವ ಚುನಾವಣೆಗೆ ಐಡಿ ಕಾರ್ಡ್ ಒದಗಿಸಿಕೊಡಿ: ಹೇಮಾನಂದ ಮನವಿ