ನ್ಯೂಸ್ ನಾಟೌಟ್: ಪ್ರವಾಸಕ್ಕೆಂದು ಅಬ್ಬಿ ಫಾಲ್ಸ್ ಗೆ ಬಂದಿದ್ದ ಪ್ರವಾಸಿಗರ ಮೇಲೆ ಕ್ಷುಲ್ಲಕ ಕಾರಣಕ್ಕೆ ಪಾರ್ಕಿಂಗ್ ಸುಂಕ ವಸೂಲಿಗಾರರು ದೊಣ್ಣೆಯಿಂದ ಹೊಡೆದು ಹಲ್ಲೆ ಮಾಡಿರುವ ಘಟನೆ ಮಡಿಕೇರಿಯ ಅಬ್ಬಿ ಫಾಲ್ಸ್‌ನಲ್ಲಿ ನಡೆದಿದೆ.
ಹಲ್ಲೆ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಳೆದ ಒಂದು ವಾರದ ಹಿಂದೆ ಆಟೋ ಡ್ರೈವರ್ ಒಬ್ಬರಿಗೆ ಇದೇ ರೀತಿ ಹಲ್ಲೆ ನಡೆಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಹೀಗೇ ಹಲವು ಬಾರಿ ಪ್ರವಾಸಿಗರ ಮೇಲೆ ಇಲ್ಲಿನ ಸುಂಕ ವಸೂಲಿಗಾರರು ಹಲ್ಲೆ ನಡೆಸುತ್ತಿದ್ದಾರೆ ಎಂಬ ಆರೋಪ ಆಗಾಗ ಕೇಳಿ ಬರುತ್ತಿದ್ದು, ಆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.