ದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಮಹಾಕುಂಭ ಮೇಳದಲ್ಲಿ ಸ್ವಾಮೀಜಿಯ ಶಿಬಿರದ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ..! ಈ ಬಗ್ಗೆ ಪೊಲೀಸರು ಹೇಳಿದ್ದೇನು..?

ನ್ಯೂಸ್ ನಾಟೌಟ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಆವರಣದ ದಾಸ್ನಾ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಗಿರಿ ಎಂಬವರ ಶಿಬಿರದ ಬಳಿ ಮುಸ್ಲಿಂ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಓಡಾಡುತ್ತಿದದ್ದು ಕಂಡುಬಂದಿದೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮುಸ್ಲಿಂ ವ್ಯಕ್ತಿ ತಮ್ಮ ಶಿಬಿರದ ಹೊರಗೆ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಾಣಿಸಿದೆ. ಅಲ್ಲಿದ್ದವರು ಆತನನ್ನು ಪ್ರಶ್ನಿಸಿದಾಗ ತನ್ನ ಹೆಸರು ಅಯುಬ್ ಎಂದು ಬಾಯ್ಬಿಟ್ಟಿದ್ದಾನೆ. ಬಳಿಕ ಶಿಬಿರದ ಸ್ವಯಂ ಸೇವಕರು ಆತನನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.

ಪ್ರವಾದಿ ಮಹಮ್ಮದ್ ವಿರುದ್ಧ ಹೇಳಿಕೆಗಾಗಿ ಮತ್ತು ಹಲವು ದ್ವೇಷಪೂರಿತ ಭಾಷಣಗಳ ಕೇಸ್ ಗಳು ನರಸಿಂಹಾನಂದ ಸ್ವಾಮೀಜಿ ಮೇಲೆ ದಾಖಲಾಗಿದ್ದವು.
ವಿಶೇಷ ಕಾರ್ಯಾಚರಣೆ ತಂಡ (ಎಸ್‌ಒಟಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ವ್ಯಕ್ತಿಯನ್ನು ವಿಚಾರಣೆ ನಡೆಸಿದೆ ಎಂದು ಅಖಾರಾ ಪೊಲೀಸರು ತಿಳಿಸಿದ್ದಾರೆ. ವ್ಯಕ್ತಿಯನ್ನು ಅಯೂಬ್ ಎಂದು ಗುರುತಿಸಲಾಗಿದ್ದು, ಇಟಾಹ್ ಮೂಲದವರು. ಕುತೂಹಲದಿಂದ ಅಥವಾ ಆಹಾರದ ಹುಡುಕಾಟದಲ್ಲಿ ಆತ ಇಲ್ಲಿ ಇದ್ದ ಎಂದು ತೋರುತ್ತದೆ. ಅವರಿಂದ ಯಾವುದೇ ಅನುಮಾನಾಸ್ಪದ ವಸ್ತುಗಳು ಆತನ ಬಳಿ ಪತ್ತೆಯಾಗಿಲ್ಲ. ಈ ವಿಚಾರದಲ್ಲಿ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.

Click

https://newsnotout.com/2025/01/udupi-kannada-news-malpe-jwellery-viral-news/
https://newsnotout.com/2025/01/kumbha-mela-nagasadhu-kannada-news-3-5-crore-people/
https://newsnotout.com/2025/01/tulu-cinema-rupesh-shetty-and-bollywood-actor-tulunadu/
https://newsnotout.com/2025/01/monkey-illness-kannada-news-132-people-issue-last-year/
https://newsnotout.com/2025/01/mahakumbha-mela-steve-jobs-wife-in-kumbh-mela-kannada-news-health/

Related posts

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಮಗು ಮಾರಾಟ ದಂಧೆ ಕೇಸ್,ವೈದ್ಯನೇ ಶಾಮೀಲು..!

ಮಡಿಕೇರಿ: ಅಭಿಫಾಲ್ಸ್ ಗೆ ಹಾರಿದೆ ಎಂದು ಯಾಮಾರಿಸಿದಳಾ ಯುವತಿ..? ಕೆಲವು ಕಿ.ಮೀ. ಹುಡುಕಿದರೂ ಸುಳಿವಿಲ್ಲ..! ಕಾರ್ಯಾಚರಣೆ ಸ್ಥಗಿತಗೊಳಿಸಿದ ಎನ್‌ ಡಿಆರ್ಎಫ್ ಹೇಳಿದ್ದೇನು..?

ದಿ ಕೇರಳ ಸ್ಟೋರಿ ಸಿನಿಮಾ ಬಗ್ಗೆ ಗೆಳೆಯರ ಮಧ್ಯೆ ಗಲಾಟೆ! ಅತ್ಯಾಚಾರ ಪ್ರಕರಣ ದಾಖಲಿಸಿದ ಯುವತಿ! ಗೆಳೆಯ ಅರೆಸ್ಟ್..!