ಕರಾವಳಿಕ್ರೈಂವೈರಲ್ ನ್ಯೂಸ್

ಮಹೇಶ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು ,ಏನಿದು ಸೌಜನ್ಯ ಪರ ಹೋರಾಟಗಾರನ ವಿರುದ್ಧ ದೂರು?

ನ್ಯೂಸ್ ನಾಟೌಟ್ : ಸೌಜನ್ಯ ಪರ ಹೋರಾಟದ ಮುಂಚೂಣಿಯ ನಾಯಕ , ಪ್ರಜಾಪ್ರಭುತ್ವ ವೇದಿಕೆ ಮತ್ತು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಧರ್ಮಸ್ಥಳ ಗ್ರಾಮದ ಸಂದೀಪ್ ರೈ ಎಂಬವರು ತಿಮರೋಡಿ ಹಾಗೂ ಇನ್ನುಳಿದವರ ವಿರುದ್ಧ ಕೇಸು ದಾಖಲಿಸಿದ್ದಾರೆ.

ಅ.29ರಂದು ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು. ಸಮೀಪದಲ್ಲೇ ಸದ್ರಿ ಪಾದಯಾತ್ರೆಯನ್ನು ನಿಲ್ಲಿಸುವ ಒಳಸಂಚಿನಿಂದ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣಿಗೆಗಳನ್ನು ಹೊಂದಿರುವ ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು ಎನ್ನಲಾಗಿದೆ.

ಇದು ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವ, ದ್ವೇಷ, ವೈಮನಸ್ಸು ಭಾವನೆಗಳನ್ನು ಬಿತ್ತಿಸಿ ಅಸೌಹಾರ್ದತೆಯನ್ನು ಸೃಷ್ಟಿಸಿರುತ್ತದೆ ಎಂದು ಸಂದೀಪ್ ರೈ ದೂರು ನೀಡಿದ್ದಾರೆ.

ಅವರು ನೀಡಿರುವ ದೂರಿನಂತೆ ಮಹೇಶ್ ಶೆಟ್ಟಿ ತಿಮರೋಡಿ, ಅನಿಲ್ ಕುಮಾರ್ ಅಂತರ, ಕಿರಣ್ ಗೌಡ, ಪ್ರಜ್ವಲ್ ಕೆ.ವಿ. ಗೌಡ, ಮನೋಹರ್ ಮನ್ನಡ್ಕ, ಮನೋಜ್ ಸಾಲ್ಯಾನ್ ಕುಂಜರ್ಪ ಮತ್ತು ಇತರರ ವಿರುದ್ದ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಕದಡುವಂತಹ ಕೆಟ್ಟದಾಗಿ ಶಬ್ಧಗಳನ್ನು ಬರೆದ ಬ್ಯಾನರ್ ಅಳವಡಿಸಲು ಅನುಮತಿ ನೀಡಿದ ಉಜಿರೆಯ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಹಾಗೂ ಕಾರ್ಯದರ್ಶಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅರಂತೋಡು: ಸಂಭ್ರಮದ ಈದ್ ಮಿಲಾದ್ ಆಚರಣೆ, ಪ್ರತಿಭಾ ಪುರಸ್ಕಾರ

ಪೆರಾಜೆ: ಸುಳ್ಯಕ್ಕೆ ಬಸ್ ನಲ್ಲಿ ಪ್ರಯಾಣಿಸುವಾಗ ಚಿನ್ನದ ಸರ ಬಿದ್ದು ಹೋಗಿದೆ, ಸಿಕ್ಕಿದವರು ತಕ್ಷಣ ಸಂಪರ್ಕಿಸಿ

ಅಯೋಧ್ಯೆಯಲ್ಲಿ ಮಹಿಳೆಯೊಬ್ಬರ ಮನೆಗೆ ದಿಢೀರ್ ತೆರಳಿದ್ದೇಕೆ ಮೋದಿ..? ಯಾರೀ ಮಹಿಳೆ?