ಕರಾವಳಿವೈರಲ್ ನ್ಯೂಸ್ಸಿನಿಮಾ

ಮಲಯಾಳಂ ಖ್ಯಾತ ನಟ ಸಿದ್ದಿಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು..! ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ..!

218

ನ್ಯೂಸ್ ನಾಟೌಟ್: ಮಲಯಾಳಂ ನಟ ಸಿದ್ದಿಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. 2016ರಲ್ಲಿ ಸಿದ್ದಿಕ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಟಿಯೊಬ್ಬರು ನೀಡಿರುವ ದೂರನ್ನು ಆಧರಿಸಿ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

2016ರಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವ ಆರೋಪ ಕೇಳಿಬಂದಿರುವುದರಿಂದ, ಐಪಿಸಿ ಅಡಿಯಲ್ಲೇ ಪ್ರಕರಣ ದಾಖಲಿಸಲಾಗಿದೆ.
ಮಾಲಿವುಡ್‌ನ ಹಲವು ನಿರ್ದೇಶಕರು ಮತ್ತು ನಟರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕುರಿತಾದ ನಿವೃತ್ತ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯು ಬಹಿರಂಗವಾದ ಬಳಿಕ ಚಿತ್ರರಂಗದ ಹೈ ಪ್ರೊಫೈಲ್ ವ್ಯಕ್ತಿ ವಿರುದ್ಧ ದಾಖಲಾದ ಎರಡನೇ ಎಫ್‌ಐಆರ್ ಇದಾಗಿದೆ. 2009ರಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ನಟಿಯೊಬ್ಬರು ನೀಡಿದ ದೂರಿನ ಮೇರೆಗೆ ನಿರ್ದೇಶಕ ರಂಜಿತ್ ವಿರುದ್ಧ ಐಪಿಸಿ ಸೆಕ್ಷನ್ 354ರ (ಮಹಿಳೆಯರ ಮೇಲಿನ ದೌರ್ಜನ್ಯ) ಅಡಿ ಮೊದಲ ಪ್ರಕರಣ ದಾಖಲಾಗಿತ್ತು.

2009ರಲ್ಲಿ ಪಲೇರಿ ಮಾಣಿಕ್ಯಂ ಚಿತ್ರದಲ್ಲಿ ನಟಿಸಲು ಆಹ್ವಾನಿಸಿದ್ದ ನಿರ್ದೇಶಕರು, ಲೈಂಗಿಕ ಉದ್ದೇಶದಿಂದ ಅನುಚಿತವಾಗಿ ಸ್ಪರ್ಶಿಸಿದ್ದರು ಎಂದು ನಟಿ ಆರೋಪಿಸಿದ್ದರು.
ಆರೋಪದ ಬೆನ್ನಲ್ಲೇ ರಂಜಿತ್, ಕೇರಳ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿದ್ದಿಕ್ ಸಹ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

Click

https://newsnotout.com/2024/08/rajyapala-governer-marriage-age-of-girl-increased-kannada-news/
See also  ಮಂಗಳೂರು ಭೀಕರ ವಿಮಾನ ದುರಂತಕ್ಕೆ ಇಂದಿಗೆ(ಮೇ.22)14 ವರ್ಷ..! ಶ್ರದ್ಧಾಂಜಲಿ ಕಾರ್ಯಕ್ರಮ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget