ಸುಳ್ಯ: ಮಲ್ನಾಡು ಕ್ಯಾಶೂ ಫ್ಯಾಕ್ಟರಿಯ ಹಳೆ ಕಟ್ಟಡದ ಗೋಡೆ ಕುಸಿದು ಬಿದ್ದು ವ್ಯಾಪಾರಿಯೊಬ್ಬರು ಮೃತಪಟ್ಟ ದಾರುಣ ಘಟನೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಮೃತಪಟ್ಟ ವ್ಯಾಪಾರಿಯನ್ನು ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ. ಇವರು ಕಳೆದ ಹಲವಾರು ವರ್ಷಗಳಿಂದ ಸುಳ್ಯದ ಎಪಿಎಂಸಿ ಬಳಿ ಗುಜಿರಿ ವ್ಯಾಪಾರ ಮಾಡುತ್ತಿದ್ದು, ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ.