ನ್ಯೂಸ್ ನಾಟೌಟ್: ವಿದ್ಯಾರ್ಥಿನಿಯರ ಶೌಚಾಲಯದ ಒಳಗೆ ನುಗ್ಗಿದ ಅಪರಿಚಿತ ವ್ಯಕ್ತಿ ಒಳಗಿನಿಂದ ಲಾಕ್ ಮಾಡಿಕೊಂಡು ವಿದ್ಯಾರ್ಥಿನಿಯರ ಬಾಯಿ ಮುಚ್ಚಿ, ಕೈ ಎಳೆದಾಡಿರುವ ಘಟನೆ ಬೆಂಗಳೂರಿನ ಜಯನಗರದ ವಿಜಯ ಕಾಲೇಜಿನಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದರೂ ದೂರು ನೀಡಲು ಕಾಲೇಜು ಆಡಳಿತ ಮಂಡಳಿ ತಡ ಮಾಡಿದೆ. ಕಾಲೇಜಿನ ಲೇಡಿಸ್ ಟಾಯ್ಲೆಟ್‌ಗೆ ನುಗ್ಗಿದ್ದ ಅಪರಿಚಿತ ವ್ಯಕ್ತಿ, ಒಳಗಿನಿಂದ ಲಾಕ್ ಹಾಕಿದ್ದಾನೆ. ಬಳಿಕ ಅಲ್ಲಿದ್ದ ವಿದ್ಯಾರ್ಥಿನಿಯರ ಕೈಹಿಡಿದು ಎಳೆದಿದ್ದಾನೆ. ಅದಾದ ಬಳಿಕ ಹೊರಗೆ ಹೇಳಿದರೆ, ಸುಮ್ಮನೆ ಬಿಡೋದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾನೆ. ಎಲ್ಲ ವಿದ್ಯಾರ್ಥಿನಿಯರು ಕೂಗಿಕೊಂಡಾಗ ಕಾಲೇಜಿನ ನಾಲ್ಕನೇ ಮಹಡಿಯ ಲೇಡಿಸ್ ಟಾಯ್ಲೆಟ್‌ನಿಂದ ಎಸ್ಕೇಪ್ ಆಗಿದ್ದಾನೆ. ಬುಧವಾರ ಬೆಳಗ್ಗೆ ಕಾಲೇಜಿನಲ್ಲಿ ಭದ್ರತೆಯಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದರು. ಸ್ಥಳಕ್ಕೆ ಬಂದ ಜಯನಗರ ಪೊಲೀಸರು ವಿದ್ಯಾರ್ಥಿಗಳ ಮನವೊಲಿಸಿದ್ದಾರೆ. ನಂತರ ಪ್ರತಿಭಟನೆಯನ್ನು ಕೈಬಿಟ್ಟರು.