ಕರಾವಳಿಕ್ರೈಂ

ಬೆಳ್ತಂಗಡಿ: ಇಲಿ ಪಾಷಾಣ ಸೇವಿಸಿದ ವ್ಯಕ್ತಿ ಸಾವು

366

ನ್ಯೂಸ್‌ನಾಟೌಟ್‌:  ಇಲಿ ಪಾಷಾಣ ಸೇವಿಸಿದ್ದ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮಜಲು ಮನೆ ನಿವಾಸಿ ಸಂಜೀವ ಪೂಜಾರಿ (60) ಚಿಕಿತ್ಸೆಗೆ ಸ್ಪಂದಿಸದೆ ಎ.30ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಚಾಲಕ ವೃತ್ತಿ ಮಾಡುತ್ತಿದ್ದ ಅವರು ಒಂದು ವರ್ಷದಿಂದ ಕೆಲಸ ಬಿಟ್ಟು ಮನೆ ಸಮೀಪದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು.

ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಅವರು ಹಣದ ಕೊರತೆಯಿಂದಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಎ.22ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಮನೆಯಲ್ಲಿ ತಂದಿಟ್ಟಿದ್ದ ಇಲಿ ಪಾಷಾಣ ಸೇವಿಸಿದ್ದರು. ಕೂಡಲೇ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಭಾನುವಾರ ಬೆಳಗ್ಗೆ ನಿಧನ ಹೊಂದಿದರು. ಪುತ್ರ ಸಂದೀಪ್‌ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಎಲಿಮಲೆ: ಹೂ ವ್ಯಾಪಾರಿಯ ಪುತ್ರಿಯಿಂದ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget