Latestಕ್ರೈಂರಾಜ್ಯ

ತೆರೆದ ಬಾವಿಗೆ ಬಿದ್ದು 3 ವರ್ಷದ ಮಗು ಸಾವು..! ಪ್ರಕರಣ ದಾಖಲು..!

321

ನ್ಯೂಸ್‌ ನಾಟೌಟ್ : ಆಟವಾಡುತ್ತಿದ್ದ ಮಗು ತೆರೆದ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ.

3 ವರ್ಷದ ಹರ್ಷಿತ್ ಪಾಟೀಲ್ ಬಾವಿಗೆ ಬಿದ್ದು ಸಾವನ್ನಪ್ಪಿರುವ ಮಗು ಎಂದು ಗುರುತಿಸಲಾಗಿದೆ. ಶುಕ್ರವಾರ ಮಗು ಮನೆಯಿಂದ ನಾಪತ್ತೆಯಾಗಿತ್ತು. ಮಗು ಎಲ್ಲಿದೆ ಎನ್ನುವ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ಕಂಗಾಲಾದ ಕುಟುಂಬಸ್ಥರು ಹರ್ಷಿತ್ ಹುಡುಕಾಟದಲ್ಲಿ ತೊಡಗಿದ್ದರು. ಇಂದು ಸ್ಥಳೀಯರು ಬಾವಿಯಲ್ಲಿ ಇಳಿದು ನೋಡಿದಾಗ ಮಗುವಿನ ಮೃತದೇಹ ಪತ್ತೆಯಾಗಿದೆ.

ಕುಟುಂಬಸ್ಥರು ಮಗುವನ್ನು ತೆರೆದ ಬಾವಿಯ ಆಸುಪಾಸಲ್ಲಿ ಆಡಲು ಬಿಟ್ಟಾಗ ಅನಾಹುತ ನಡೆದಿದೆ ಎನ್ನಲಾಗಿದೆ. ಘಟನೆ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಸೇನಾ ಪ್ರದೇಶದ ಫೋಟೊ ತೆಗೆದ ಇಬ್ಬರು ಪೊಲೀಸ್ ವಶಕ್ಕೆ..! ಇಲ್ಲಿದೆ ಸಂಪೂರ್ಣ ಮಾಹಿತಿ

See also  ತೋಟದ ಮನೆಯ ಮರಳಿನ ರಾಶಿಯೊಳಗಿತ್ತು ಕಂತೆ-ಕಂತೆ ಹಣ! ಮತದಾನದ ಮುಂಚಿನ ದಿನದ ಹಣದ ಬೇಟೆಯಲ್ಲೊಂದು ರೋಚಕ ಸ್ಟೋರಿ!
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget