ನ್ಯೂಸ್ ನಾಟೌಟ್: ತೋಟಕ್ಕೆಂದು ಹೋದ ಬೆಳ್ತಂಗಡಿಯ ಕೃಷಿಕರೊಬ್ಬರು ಮರಳಿ ಮನೆಗೆ ಬಾರದೆ ಕಾಣೆಯಾಗಿರುವ ಘಟನೆ ಬೆಳ್ತಂಗಡಿಯಿಂದ ವರದಿಯಾಗಿದೆ. ಅಡ್ಯ ನಿವಾಸಿ ಲಿಂಗಪ್ಪ ಪೂಜಾರಿ(65) ನಾಪತ್ತೆಯಾದವರಾಗಿದ್ದಾರೆ. ಇವರು ತೋಟದ ಸಮೀಪ ರಭಸದಿಂದ ಹರಿಯುತ್ತಿರುವ ನದಿಯಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಸದ್ಯ ಮುಳುಗು ತಜ್ಞರು, ಅಗ್ನಿಶಾಮಕ ದಳ, ಪೊಲೀಸರ ಸಹಕಾರದಿಂದ ಹುಡುಕಾಟ ನಡೆಸಿದರೂ ಇದುವರೆಗೆ ವ್ಯಕ್ತಿ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.