Latestರಾಜ್ಯ

ಫೋಟೋ ತೆಗೆಸಿಕೊಳ್ಳಲು ಹೋಗಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ..! ಪಿಕ್ನಿಕ್‌ಗೆ ಬಂದಿದ್ದ ಆಟೋ ಡ್ರೈವರ್‌ನ ದುರಂತ ಅಂತ್ಯ

536

ನ್ಯೂಸ್‌ ನಾಟೌಟ್‌: ಫೋಟೋ ತೆಗೆಸಿಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿ ಹೋದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಸರ್ವಧರ್ಮ ಆಶ್ರಮದ ಬಳಿ ನಡೆದಿದೆ.

ಮೈಸೂರಿನಲ್ಲಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ ( 36) ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ. ಭಾನುವಾರ ಸಂಜೆ ಮಹೇಶ್‌ ಸ್ನೇಹಿತರೊಂದಿಗೆ ಕೆಆರ್‌ಎಸ್ ಭಾಗಕ್ಕೆ ಪಿಕ್ನಿಕ್‌ ಬಂದಿದ್ದರು. ಸರ್ವಧರ್ಮ ಆಶ್ರಮದ ಫೋಟೋ ತೆಗೆಸಿಕೊಳ್ಳಲು ಹೋದಾಗ ಆಯತಪ್ಪಿ ಕಾವೇರಿ ನದಿಗೆ ಬಿದ್ದಿದ್ದಾರೆ. ನದಿಯಲ್ಲಿ ನೀರು ಹೆಚ್ಚಿದ್ದ ಕಾರಣ ಮಹೇಶ್‌ ಕೊಚ್ಚಿ ಹೋಗಿದ್ದಾರೆ. ಕೊಚ್ಚಿ ಹೋದ ಮಹೇಶ್‌ ಪತ್ತೆಗಾಗಿ ಅಗ್ನಿಶಾಮಕ ದಳ ಶೋಧ ಕಾರ್ಯ ನಡೆಸುತ್ತಿದೆ. ಕೆಆರ್‌ಎಸ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

See also  ಆಟವಾಡುತ್ತಾ ಕಾರಿನೊಳಗೆ ಹೋದ ಬಾಲಕಿಯರು ಉಸಿರುಗಟ್ಟಿ ಸಾವು..! ಮದುವೆಗೆ ಬಂದಿದ್ದ ವೇಳೆ ಘಟನೆ..!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget