ಕರಾವಳಿಕೊಡಗು

ಮಾಂಡೌಸ್ ಚಂಡಮಾರುತ ಹಿನ್ನೆಲೆ: ದಕ್ಷಿಣ ಕನ್ನಡ, ಕೊಡಗಿನಲ್ಲಿ ಮಳೆ ಸಾಧ್ಯತೆ

ನ್ಯೂಸ್ ನಾಟೌಟ್: ಬಂಗಾಳ ಕೊಲ್ಲಿಯಲ್ಲಿ ಸೃಷ್ಠಿಯಾಗಿರುವ ಮಾಂಡೌಸ್ ಚಂಡಮಾರುತ ತಮಿಳುನಾಡು ಕಡಲ ತೀರಕ್ಕೆ ಅಪ್ಪಳಿಸಿ ಭಾರಿ ಅನಾಹುತ ಸೃಷ್ಟಿಸಿದೆ. ಈ ಹಿನ್ನಲೆ ರಾಜ್ಯದ ವಿವಿಧ ಕಡೆ ಮೂರು ದಿನ ಮಳೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗ್ಗಿನಿಂದಲೇ ಮೂಡ ಮುಸುಕಿನ ವಾತಾವರಣವಿದ್ದು ಸಂಜೆಯ ವೇಳೆ ಜಟಿಜಟಿ ಮಳೆ ಸುರಿಯುವ ನಿರೀಕ್ಷೆ ಇದೆ.

ಚಂಡ ಮಾರುತದ ಹಿನ್ನೆಲೆಯಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರಿಯಲಿದೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಹಾಗೂ ಬೆಂಗಳೂರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು, ಚಾಮರಾಜನಗರ ಹಾಗೂ ಕೋಲಾರಕ್ಕೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ದೆ. ಇನ್ನು ಕರಾವಳಿ ಭಾಗಕ್ಕೆ ಗಾಳಿಯ ಪ್ರಮಾಣ 65 ರಿಂದ 75 ಕೀ.ಮೀ‌ ವೇಗದಲ್ಲಿ ಇರಲಿದ್ದು, ಡಿಸೆಂಬರ್ 12 ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related posts

ಸುಳ್ಯ: ಕುಸಲ್ದರಸೆ ನವೀನ್ ಡಿ. ಪಡೀಲ್‌ರಿಗೆ ‘ಮೂಗಜ್ಜನ ಕೋಳಿ’ ಚಿತ್ರಕ್ಕೆ ‘ಅತ್ಯುತ್ತಮ ನಟ’ ಪ್ರಶಸ್ತಿ ,ಸುಳ್ಯದ ಒಕ್ಕಲಿಗರು ಆಡುವ ಭಾಷೆ ಅರೆ ಭಾಷೆಯ ಮೊದಲ ಸಿನಿಮಾದಲ್ಲಿ ಅಭಿನಯಿಸಿದ್ದ ತುಳು ಹಾಸ್ಯನಟ..!

ಕುದ್ಮಾರು: ಆ್ಯಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಪುತ್ತೂರು : 8 ತಿಂಗಳಿನಿಂದ ತರೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಸೆರೆ ! ಇವನ ಮೇಲಿತ್ತು ಹಲವು ಪ್ರಕರಣ !