ಕರಾವಳಿ

ಮಂಗಳೂರು ಬಾಂಬ್ ಸ್ಪೋಟ ಪ್ರಕರಣ, ಹೊಣೆ ಹೊತ್ತುಕೊಂಡ ಐಸಿಸ್

265

ನ್ಯೂಸ್ ನಾಟೌಟ್: ಕಳೆದ ವರ್ಷದ ನವೆಂಬರ್ ನಲ್ಲಿ ಮಂಗಳೂರು ಕಂಕನಾಡಿ ಬಳಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಹೊಣೆಯನ್ನು ಉಗ್ರ ಸಂಘಟನೆ ಐಸಿಸ್ (ISIS) ಹೊತ್ತುಕೊಂಡಿದೆ ಎಂದು ವರದಿ ತಿಳಿಸಿದೆ.ಕಳೆದ ವರ್ಷ ತಮಿಳುನಾಡಿನ ಕೊಯಮತ್ತೂರು ಮತ್ತು ಕರ್ನಾಟಕದ ಮಂಗಳೂರಿನಲ್ಲಿ ನಡೆದ ಸ್ಫೋಟವನ್ನೂ ಐಎಸ್ ಗೆ ಸೇರಿದ ಉಗ್ರರು ನಡೆಸಿದ್ದರು ಎಂದು ಹೇಳಿಕೊಂಡಿದೆ.

ಇಸ್ಲಾಮಿಕ್ ಸ್ಟೇಟ್ ವಿಲಾಯಾ ಖೋರಾಸಾನ್ ತನ್ನ ವಾಯ್ಸ್ ಆಫ್ ಖೋರಾಸಾನ್ ನಿಯತಕಾಲಿಕೆಯ 23ನೇ ಸಂಚಿಕೆಯಲ್ಲಿ, ಕಳೆದ ವರ್ಷ ಕರ್ನಾಟಕದ ಮಂಗಳೂರಿನಲ್ಲಿ ನಡೆದ ಸ್ಫೋಟವನ್ನು ಐಎಸ್ ಅಂಗಸಂಸ್ಥೆ ಉಗ್ರಗಾಮಿಗಳು ನಡೆಸಿದೆ ಎಂದು ಹೇಳಿಕೊಂಡಿದೆ. ಮಂಗಳೂರಿನಲ್ಲಿ ನಡೆದ ಸ್ಫೋಟವು ಆಕಸ್ಮಿಕವಲ್ಲ. ಇದು ‘ಭಯೋತ್ಪಾದನಾ ಕೃತ್ಯ’ ಎಂದು ರಾಜ್ಯದ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್ ಆ ಸಮಯದಲ್ಲೇ ಸ್ಪಷ್ಟಪಡಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಈ ನಿಟ್ಟಿನಲ್ಲಿ ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದೂ ಪ್ರವೀಣ್ ಸೂದ್ ಮಾಹಿತಿ ನೀಡಿದ್ದರು.

See also  ಸೆಲೆಬ್ರಿಟಿಗಳಿಗೆ ಟ್ವಿಟ್ಟರ್ ಶಾಕ್! ರಾತ್ರೋ ರಾತ್ರಿ ಬ್ಲೂಟಿಕ್ ಮಾಯ!
  Ad Widget   Ad Widget   Ad Widget   Ad Widget   Ad Widget   Ad Widget   Ad Widget