ಕರಾವಳಿ

3 ಕೋಟಿ ರೂ.ವಿಗೂ ಅಧಿಕ ಮೌಲ್ಯದ ತಿಮಿಂಗಿಲ ವಾಂತಿ ವಶ, ಬೆಳ್ತಂಗಡಿ ಮೂಲದ ವ್ಯಕ್ತಿ ಸೇರಿದಂತೆ ಇಬ್ಬರ ಬಂಧನ

ನ್ಯೂಸ್ ನಾಟೌಟ್: ಕೋಟ್ಯಂತರ ರೂ. ಬೆಲೆ ಬಾಳುವ ಆಂಬರ್-ಗ್ರೀಸ್(ತಿಮಿಂಗಿಲ ವಾಂತಿ)ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಸ್ವತ್ತು ಸಹಿತ ಅಪರಾಧಿಗಳನ್ನು ಸೆರೆ ಹಿಡಿದಿದ್ದಾರೆ.

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಪಡ್ಯಾರು ಮನೆ ನಿವಾಸಿ ನಿಮಿತ್ (26 ) ಹಾಗೂ ಪುಂಜಾಲಕಟ್ಟೆ ಕುಕ್ಕಳ ಮನೆ ನಿವಾಸಿ ಯೋಗೀಶ್ ಪೂಜಾರಿ (41) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 3.2 ಕೆಜಿ ತೂಕದ ಅಂಬರ್ ಗ್ರೀಸ್ ಹಾಗೂ 2 ಮೊಬೈಲ್ ಫೋನ್‌ನ್ನು ವಶಪಡಿಸಿಕೊಳ್ಳಲಾಗಿದೆ. ಇದಕ್ಕೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 3 ಕೋಟಿ ರೂ.ವಿಗೂ ಅಧಿಕ ಮೌಲ್ಯ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಲಾಲ್ ಭಾಗ್‌ನ ಕರಾವಳಿ ಮೈದಾನ ಪರಿಸರದಲ್ಲಿ ಅಂಬರ್-ಗ್ರೀಸ್‌ನ್ನು ವಶದಲ್ಲಿಟ್ಟು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆಂಬ ಖಚಿತ ಮಾಹಿತಿಯನ್ನು ಆಧರಿಸಿ ಮಂಗಳೂರು ಸಿಸಿಬಿ ಇನ್ ಸ್ಪೆಕ್ಟರ್ ಶ್ಯಾಮ್ ಸುಂದರ್ ಎಚ್.ಎಂ. ನೇತೃತ್ವದಲ್ಲಿ ಪಿಎಸ್ಸೈಯವರಾದ ರಾಜೇಂದ್ರ ಬಿ, ಸುದೀಪ್ ಎಂ.ವಿ. ಹಾಗೂ ಸಿಸಿಬಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಮನೆಯ ಅಂಗಳಕ್ಕೆ ನುಗ್ಗಿದ ಆಂಬ್ಯುಲೆನ್ಸ್..! ರಸ್ತೆ ಬದಿಯಲ್ಲಿ ನಿಂತಿದ್ದ ಶಾಲಾ ಮಕ್ಕಳು ಅಪಾಯದಿಂದ ಪಾರು..!

ಆದಿ ಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದ ಮಹಾಸ್ವಾಮೀಜಿಗಳನ್ನು ಭೇಟಿಯಾದ ಸೌಜನ್ಯ ಕುಟುಂಬ, ಸೌಜನ್ಯ ನ್ಯಾಯಕ್ಕಾಗಿ ಸ್ವಾಮೀಜಿ ಕೊಟ್ಟ ಭರವಸೆ ಏನು?

ಉದ್ಯಮಿ ಹಾಗೂ ಎಂ.ಬಿ ಫೌಂಡೇಶನ್ ಸ್ಥಾಪಕಾಧ್ಯಕ್ಷ ಎಂ.ಬಿ. ಸದಾಶಿವರಿಗೆ ಮಾತೃವಿಯೋಗ