ಕ್ರೈಂ

ಮಂಗಳೂರು: ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಹರಿದ ಕಾರು..! ಓರ್ವ ಯುವತಿ ಬಲಿ, ನಾಲ್ವರು ಗಂಭೀರ, ಚಾಲಕ ನಿಲ್ಲಿಸದೆ ಪರಾರಿ

170

ನ್ಯೂಸ್ ನಾಟೌಟ್: ನಗರದ ಲೇಡಿಹಿಲ್ ಬಳಿ ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐದು ಮಂದಿ ಮೇಲೆ ಕಾರು ಹರಿದು ಓರ್ವ ಯುವತಿ ದಾರುಣವಾಗಿ ಮೃತಪಟ್ಟಿದ್ದಾಳೆ. ಭೀಕರ ಅಪಘಾತ ಬುಧವಾರ (ಅ18) ಸಂಜೆ 4 ಗಂಟೆಗೆ ಸಂಭವಿಸಿದೆ.
ಅಪಘಾತದಲ್ಲಿ ರೂಪಶ್ರೀ (23) ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸುರತ್ಕಲ್ ನ ಕಾನ, ಬಾಳದ ಗಂಗಾಧರ್ ಅವರ ಪುತ್ರಿಯಾದ ರೂಪಶ್ರೀ ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದರೆಂದು ತಿಳಿದುಬಂದಿದೆ. ಸ್ವಾತಿ (26), ಹಿತ್ನವಿ (16), ಕೃತಿಕಾ(16) ಮತ್ತು ಯತಿಕಾ(12) ರಸ್ತೆಗೆ ಅಪ್ಪಳಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ದಾಖಲಿಸಲಾಗಿದೆ.

5 ಮಂದಿ ಹುಡುಗಿಯರು ಮಂಗಳೂರು ಕಾರ್ಪೋರೇಷನ್ ಈಜುಕೊಳದ ಬಳಿ ಲೇಡಿಹಿಲ್ ನಿಂದ ಮಣ್ಣಗುಡ್ಡ ಜಂಕ್ಷನ್ ಕಡೆಗೆ ಫುಟ್‌ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಅದೇ ವೇಳೆ ಮಣ್ಣಗುಡ್ಡ ಜಂಕ್ಷನ್‌ನಿಂದ ಲೇಡಿಹಿಲ್ ಕಡೆಗೆ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಅತೀ ವೇಗದಲ್ಲಿ ಬಂದ ಕಾರು ಐವರಿಗೂ ಢಿಕ್ಕಿಯಾಗಿದೆ.


ಕಾರು ಚಾಲಕ ಕಮಲೇಶ್ ಬಲದೇವ್ ಎಂಬಾತ ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ,ಬಳಿಕ ಶೋರೂಮ್ ಮುಂದೆ ಅಪಘಾತಕ್ಕೆ ಕಾರಣವಾದ ಕಾರನ್ನು ನಿಲ್ಲಿಸಿ ಮನೆಗೆ ಹೋಗಿ ಟ್ರಾಫಿಕ್ ವೆಸ್ಟ್ ಪೊಲೀಸರಿಗೆ ಶರಣಾಗಿದ್ದಾನೆ. ಫುಟ್‌ಪಾತ್ ಮೇಲೆ ಕಾರು ಹತ್ತಿಸಿ ಅಪಘಾತಕ್ಕೆ ಕಾರಣವಾಗಿದ್ದಾನೆ. ಬೆಚ್ಚಿ ಬೀಳಿಸುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

See also  ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 108ನೇ ರ‍್ಯಾಂಕ್ ಪಡೆದ ಮಹಿಳಾ ಅಭ್ಯರ್ಥಿ ಕರ್ತವ್ಯಕ್ಕೆ ಹಾಜರಾದ ಮೊದಲ ದಿನವೇ ಲಂಚ ಸ್ವೀಕರಿಸಿ ಅರೆಸ್ಟ್‌..!, ಈಕೆ ಎಷ್ಟು ಲಂಚ ಕೇಳಿದ್ದಳು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget