ಕರಾವಳಿಪುತ್ತೂರು

ಮಂಗಳೂರು:ಮಂಗಳೂರು ಉತ್ತರ ಕ್ಷೇತ್ರದಿಂದ ಮೊಯ್ದಿನ್ ಬಾವಾ ಕಣಕ್ಕೆ,ಕಾಂಗ್ರೆಸ್ ತೊರೆದು ಜೆಡಿಎಸ್ ನಿಂದ ಸ್ಪರ್ಧೆ

302

ನ್ಯೂಸ್ ನಾಟೌಟ್: ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಮೊಯ್ದಿನ್ ಬಾವಾ ಟಿಕೆಟ್ ವಂಚಿತರಾಗಿದ್ದು, ಜೆಡಿಎಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ.ಕಾಂಗ್ರೆಸ್ ಪಕ್ಷದಿಂದ ನನಗೆ ಅನ್ಯಾಯವಾಗಿದೆ ಎಂದಿದ್ದು, ಮಂಗಳೂರು ಉತ್ತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ.

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮತ್ತು ಮಾಜಿ ಶಾಸಕ ಮೊಹಿಯುದ್ದಿನ್ ಬಾವ ಅವರ ನಡುವೆ ತೀವ್ರ ಪೈಪೋಟಿ‌ ಇದ್ದಿದ್ದು, ಕೊನೆಗೂ ಹೈಕಮಾಂಡ್ ಹೊಸ ಮುಖಕ್ಕೆ ಮಣೆ ಹಾಕಿದೆ.ಈ ಹಿನ್ನಲೆಯಲ್ಲಿ ಇನಾಯತ್ ಅಲಿ ಅವರು ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಹೀಗಾಗಿ ಮಾಜಿ ಶಾಸಕ ಬಾವ ಜೆಡಿಎಸ್ ನತ್ತ ಮುಖ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ವಿಡಿಯೋ ಸಂದೇಶ ಕಳುಹಿಸಿದ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಕಾಂಗ್ರೆಸ್ ಪಕ್ಷ ಯಾವ ಬಳಸಿ ಬಿಸಾಡಿದೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ. 80% ಜನಾಭಿಪ್ರಾಯ ಇದ್ದರು ನನಗೆ ಟಿಕೆಟ್ ಕೊಡದೆ ತಪ್ಪಿಸಲಾಗಿದೆ ಎಂದಿದ್ದಾರೆ.

See also  ಮೂರು ಮಕ್ಕಳಿಗೆ ಜನ್ಮ ನೀಡಿದ ಕರಾವಳಿಯ ಮಹಾ ತಾಯಿ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget