ಕರಾವಳಿ

ಮಂಗಳೂರು: MBBS ಮೆಡಿಕಲ್ ಸೀಟು ಹೆಸರಿನಲ್ಲಿ ಭಾರಿ ಅಕ್ರಮ..! ಸರ್ಕಾರದ ಅನುಮತಿ ಇಲ್ಲದೆ ನೂರಾರು ವಿದ್ಯಾರ್ಥಿಗಳಿಗೆ ಉಂಡೆನಾಮ..!

207

ನ್ಯೂಸ್ ನಾಟೌಟ್: ಮಂಗಳೂರಿನಲ್ಲಿ ಎಂಬಿಬಿಎಸ್ ಮೆಡಿಕಲ್ ಸೀಟ್ ಹೆಸರಿನಲ್ಲಿ ಭಾರೀ ಅಕ್ರಮದ ಬಗೆಗಿನ ವರದಿಯೊಂದು ಹೊರ ಬಿದ್ದಿದೆ.

ಸರ್ಕಾರದ ಅನುಮತಿ ಇಲ್ಲದೇ ನೂರಾರು ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್ ಮಾರಾಟವಾಗಿದೆ ಅನ್ನುವಂತಹ ಆರೋಪಗಳು ಕೇಳಿಬಂದಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಸಮಗ್ರ ತನಿಖೆಗೆ ಸೂಚನೆಯನ್ನೂ ನೀಡಲಾಗಿದೆ.

ಮಂಗಳೂರಿನ ಜಿ.ಆರ್.ಮೆಡಿಕಲ್ ಕಾಲೇಜು ಹೆಸರಿನಲ್ಲಿ ಭಾರೀ ಅಕ್ರಮ ಕಂಡು ಬಂದಿದೆ. ಮಂಗಳೂರಿನ ನೀರು ಮಾರ್ಗದಲ್ಲಿ ಎರಡು ವರ್ಷಗಳ ಹಿಂದೆ ಜಿ.ಆರ್.ಮೆಡಿಕಲ್ ಕಾಲೇಜು ಆರಂಭವಾಗಿತ್ತು.

2021-22ರಲ್ಲಿ ಮೆಡಿಕಲ್ ಕಾಲೇಜು ನಡೆಸಲು ಅನುಮತಿ ಸಿಕ್ಕಿತ್ತು. ಆದರೆ 2022ರ ಸೆಪ್ಟೆಂಬರ್ ನಲ್ಲಿ ಎಂಎಆರ್ ಬಿ ತಂಡ ಕಾಲೇಜಿನ ಪರಿಶೀಲನೆ ನಡೆಸಿತ್ತು. ಈ ವೇಳೆ ಕಾಲೇಜಿನಲ್ಲಿ ರಿಸರ್ಚ್ ಸೆಂಟರ್ ಅಗತ್ಯ ಮಾನದಂಡ ಮತ್ತು ನುರಿತ ಸಿಬ್ಬಂದಿ ಇರಲಿಲ್ಲ.

ಹೀಗಾಗಿ ಎರಡನೇ ಬ್ಯಾಚ್ ನಲ್ಲಿ ಎಂಬಿಬಿಎಸ್ ದಾಖಲಾತಿಗೆ ಅವಕಾಶ ನೀಡಿರಲಿಲ್ಲ. ಹೀಗಿದ್ದರೂ ಕಾನೂನು ಬಾಹಿರವಾಗಿ 150 ಮಂದಿಗೆ ಸೀಟು ಹಂಚಿಕೆ ಮಾಡಲಾಗಿತ್ತು. ಕೋಟ್ಯಾಂತರ ರೂ. ಶುಲ್ಕ ಪಡೆದು ಸೀಟು ಹಂಚಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ.

ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಎರಡು ಬಾರಿ ತನಿಖೆಗೆ ಆಯೋಗ ಸೂಚಿಸಿತ್ತು.  ಇಲಾಖೆ ನಿರ್ಲಕ್ಷ್ಯದ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಪತ್ರ ಬರೆದಿತ್ತು. ಸದ್ಯ ಅನುಮತಿ ರದ್ದತಿ ಬಗ್ಗೆ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ಜಿ.ಆರ್.ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಮೇಲ್ಮನವಿ ಸಲ್ಲಿಸಿದೆ.

ಘಟನೆಯಿಂದ ಲಕ್ಷಾಂತರ ಶುಲ್ಕ ತೆತ್ತು ಪ್ರವೇಶ ಪಡೆದ 150 ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. 2022-23 ಸಾಲಿಗೆ 150 ವಿದ್ಯಾರ್ಥಿಗಳು ಎಂ.ಬಿ.ಬಿ.ಎಸ್ ದಾಖಲಾತಿ ಪಡೆದುಕೊಂಡಿದ್ದರು.

See also  ಶಿರಾಡಿ, ಮಡಿಕೇರಿ ಬಳಿಕ ಈಗ ಆಗುಂಬೆಯಲ್ಲೂ ಭೂಕುಸಿತ ಸಾಧ್ಯತೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget