ಕರಾವಳಿಪುತ್ತೂರು

ಪುತ್ತೂರು:ಪುತ್ತಿಲ ಪರಿವಾರದಿಂದ ಬಿಜೆಪಿಗೆ 3 ದಿನಗಳ ಗಡುವು..!ಕಮಲಕ್ಕೆ ನೀಡಿದ ಕಂಡೀಷನ್ಸ್‌ನಲ್ಲೇನಿದೆ..?ಇಲ್ಲಿದೆ ವರದಿ..

206

ನ್ಯೂಸ್‌ ನಾಟೌಟ್‌ : ಕಳೆದ ವಿಧಾನಸಭೆ ಚುನಾವಣೆಯಲ್ಲಿ (assembly election) ಬಿಜೆಪಿಯಿಂದ (BJP) ಹೊರಬಿದ್ದು ಪುತ್ತೂರು ಕ್ಷೇತ್ರದಿಂದ ಸ್ಪತಂತ್ರವಾಗಿ (independent candidate) ಸ್ಪರ್ಧಿಸಿ, ಸೋತಿದ್ದ ಅರುಣ್ ಕುಮಾರ್ ಪುತ್ತಿಲ (Arun Kumar Puthila) ಮತ್ತೆ ಬಿಜೆಪಿಗೆ ಸೇರೋ ಬಗ್ಗೆ ಮಹತ್ವದ ಚರ್ಚೆ ನಡೆದಿದೆ.ಈ ಚರ್ಚೆಯಲ್ಲಿ ಕೆಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.ಅದೇನು ಅನ್ನೋದರ ಕುರಿತ ಡಿಟೇಲ್ಸ್‌ ಇಲ್ಲಿದೆ ಮುಂದೆ ಓದಿ..

ಪುತ್ತೂರಿನಲ್ಲಿ (Puttur) ಪುತ್ತಿಲ ಪರಿವಾರದ ಬೃಹತ್ ಸಮಾಲೋಚನಾ ಸಭೆ(ಫೆ.೫ರಂದು) ನಡೆದಿದ್ದು, ಸಭೆ ಬಳಿಕ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ನಾವೆಲ್ಲ ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು (RSS) ರಕ್ತವನ್ನು ಬೆವರು ಮಾಡಿ ಮಾತೃ ಪಕ್ಷವನ್ನು‌ ಅಧಿಕಾರಕ್ಕೆ ತರಲು ದುಡಿದಿದ್ದೇವೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಪುತ್ತಿಲ ಪರಿವಾರ ಬಿಜೆಪಿಗೆ ಸೇರಲು ಸಿದ್ಧವಿದೆ. ಆದ್ರೆ ನಾವು ಕೆಲವು ನಿರ್ಧಾರಗಳನ್ನು ಸೂಚಿಸುತ್ತಿದ್ದು ಅದಕ್ಕೆ ಮೂರು ದಿನಗಳ ಒಳಗೆ ಉತ್ತರ ನೀಡಬೇಕು ಎಂದು ಹೇಳಿದ್ದಾರೆ.

ನಾವು ಯಾರನ್ನೂ ಬೈಯ್ದಿಲ್ಲ, ಹೀಗಾಗಿ ಕ್ಷಮೆ ಕೇಳೋಕೆ ಸಾಧ್ಯವೇ ಇಲ್ಲ. ಸಭೆ ನಿರ್ಣಯ ಮಂಡಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅರುಣ್ ಕುಮಾರ್ ಪುತ್ತಿಲ, ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲ ಒಟ್ಟು ಸೇರಿಸಿ ಅಧ್ಯಕ್ಷ ಸ್ಥಾನ ನೀಡಬೇಕೆಂಬುದು ಪುತ್ತಿಲ ಪರಿವಾರದ ಮುಖಂಡರ ಬೇಡಿಕೆ, ಈ ತೀರ್ಮಾನಕ್ಕೆ ನಾನು ಬದ್ಧ ಅಂತ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 718 ವಾಟ್ಸಾಪ್ ಗ್ರೂಪ್‌ಗಳಲ್ಲಿ 4,23,400 ಜನ ಬೆಂಬಲಿಗರಿದ್ದಾರೆ. ಚುನಾವಣೆಯಲ್ಲಿ ಗೆಲ್ಲಬೇಕಾದರೇ ದೊಡ್ಡ ಸಂಗತಿಯೇ ಅಲ್ಲ, ವ್ಯವಸ್ಥೆಗಳ ಅಗತ್ಯವೂ ಇಲ್ಲ. ನಾವೆಲ್ಲ ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು ರಕ್ತವನ್ನು ಬೆವರು ಮಾಡಿ ಮಾತೃ ಪಕ್ಷವನ್ನು‌ ಅಧಿಕಾರಕ್ಕೆ ತರಲು ದುಡಿದಿದ್ದೇವೆ. ಈ ಹಿನ್ನೆಲೆಯಲ್ಲಿ ಎಲ್ಲರಿಗೂ ಗೌರವ ತರುವ ವ್ಯವಸ್ಥೆಗಳು ಸುಸೂತ್ರವಾಗಿ‌ ನಡೆಯಬೇಕು ಅಂತ ಅವರು ಆಗ್ರಹಿಸಿದ್ರು.ಪುತ್ತಿಲ ಪರಿವಾರ ಸಂಘಟನೆ ಕೆಲವು ತೀರ್ಮಾನಗಳನ್ನ‌ ತೆಗೆದುಕೊಂಡಿದೆ. ಅವರ ನಿರ್ಧಾರಕ್ಕೆ ನಾನು ಕಟಿಬದ್ಧನಾಗಿದ್ದೇನೆ. ಮಾತೃ ಪಕ್ಷದವರು ಈ ಬಗ್ಗೆ ಸೂಕ್ತ ನಿರ್ಧಾರ ಮೂರು ದಿನಗಳೊಳಗೆ ಕೈಗೊಳ್ಳಬೇಕು ಇಲ್ಲದಿದ್ದರೆ ಚುನಾವಣಾ ರಾಜಕೀಯಕ್ಕೆ ಪುತ್ತಿಲ ಪರಿವಾರ ಸಿದ್ಧ ಅಂತ ಎಚ್ಚರಿಸಿದ್ದಾರೆ.ಇನ್ನು ಅರುಣ್ ಕುಮಾರ್ ಪುತ್ತಿಲ ಒಳಗೆ ಬಂದ್ರೆ ನಮ್ಮ ಕುರ್ಚಿಗೆ ಪೆಟ್ಟು ಬೀಳುತ್ತೆ ಅಂತ 4 ಜನ ಮಾತ್ರ ಅಡ್ಡಿಯಾಗಿದ್ದಾರೆ. ಅದು ಬಿಟ್ಟರೆ 32,000 ಜನರ ವಿರೋಧವೇ ಇಲ್ಲ ಅಂತ ಪುತ್ತಿಲ ಪರಿವಾರದ ಮುಖಂಡ ಶ್ರೀ ಕೃಷ್ಣ ಉಪಾಧ್ಯಾಯ ಹೇಳಿದ್ದಾರೆ.

See also  ಬಂಟ್ವಾಳ ಬಿಜೆಪಿ ಶಾಸಕ ರಾಜೇಶ್ ನಾಯ್ಕ್​ಗೆ ಕಾರು ಡಿಕ್ಕಿ..!,ಪೂಜೆ ಮುಗಿಸಿಕೊಂಡು ಬರುತ್ತಿದ್ದ ವೇಳೆ ಅವಘಡ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget