ಕರಾವಳಿ

ದುಷ್ಕರ್ಮಿಗಳಿಂದ ಹತ್ಯೆಯಾದ ಫಾಜಿಲ್, ಮಸೂದ್, ಜಲೀಲ್, ದೀಪಕ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ, ರಾಜ್ಯ ಸರಕಾರದಿಂದ ಆದೇಶ ಪ್ರಕಟ

ನ್ಯೂಸ್ ನಾಟೌಟ್:  ದ.ಕ.ಜಿಲ್ಲೆಯಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ನಾಲ್ವರ ಕುಟುಂಬಗಳಿ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಕಳೆದ ವರ್ಷದ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದರು ಎಂದು ಪ್ರಕರಣ ದಾಖಲಾಗಿತ್ತು.

ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡು ವಂತೆ ಒಳಾಡಳಿತ ಇಲಾಖೆಯನ್ನು ಕೋರಿದ ಮೇರೆಗೆ ಈ ಪರಿಹಾರ ಘೋಷಿಸಲಾಗಿದ್ದು, ಜೂ.19ರಂದು ಪರಿಹಾರದ ಧನದ ಚೆಕ್ ಪಡೆಯುವಂತೆ ಸೂಚಿಸಲಾಗಿದೆ.

Related posts

ಪುತ್ತೂರು ಮಹಾಲಿಂಗೇಶ್ವರ ದೇಗುಲದಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರಿಂದ ಪ್ರಾರ್ಥನೆ

ನಿಮ್ಮ ಮಕ್ಕಳು ಕೋರ್ಟ್, ಕೇಸ್ ನಲ್ಲಿ ಅಲೆದಾಡದಂತೆ ನೋಡಿಕೊಳ್ಳಿ, ಪೋಷಕರಿಗೆ ಕಿವಿ ಮಾತು ಹೇಳಿದ ಶಾಸಕ ಅಶೋಕ್ ರೈ

ಗೌರಿ ಶಂಕರ್‌ ಬಸ್‌ ಪಲ್ಟಿ, ಜೋಡುಪಾಲ ಬ್ಲಾಕ್‌, ಪ್ರಯಾಣಿಕರ ಪರದಾಟ