ಕರಾವಳಿ

ಮಾತ್ರೆ, ಪೇಸ್ಟ್‌ ರೂಪದಲ್ಲಿ ದುಬೈನಿಂದ ಮಂಗಳೂರಿಗೆ ಚಿನ್ನ ತಂದು ಏರ್‌ಪೋರ್ಟ್ ನಲ್ಲಿ ಸಿಕ್ಕಿ ಬಿದ್ದ ಖದೀಮ..!

ಮಂಗಳೂರು: ದುಬೈನಿಂದ ಮಂಗಳೂರಿಗೆ ಆಗಮಿಸಿದ ವ್ಯಕ್ತಿಯೊಬ್ಬ ಪೇಸ್ಟ್‌, ಮಾತ್ರೆ ರೂಪದಲ್ಲಿ ಬಚ್ಚಿಟ್ಟುಕೊಂಡು ಚಿನ್ನವನ್ನು ತಂದು ಮಂಗಳೂರಿನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ನಡೆದಿದೆ. ಆತನಿಂದ 418 ಗ್ರಾಂ ತೂಕದ 19,89,680 ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸೆ.19 ರಂದು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ನಲ್ಲಿ ದುಬೈನಿಂದ ಬಂದಿದ್ದ. ಅಕ್ರಮವಾಗಿ ಚಿನ್ನವನ್ನು ಸಾಗಿಸಲು ಈತ ಪ್ರಯತ್ನ ನಡೆಸಿದ್ದ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ಕಾಸರಗೋಡು ಮೂಲದವರು ಎಂದು ಗುರುತಿಸಲಾಗಿದೆ.

Related posts

ಲತಾಶ್ರೀ ಸುಪ್ರೀತ್ ಗೆ ಕರುನಾಡ ಕಣ್ಮಣಿ ಹಾಗೂ ಡಾ.ಅಬ್ದುಲ್ ಕಲಾಂ ಪ್ರಶಸ್ತಿ

ದೇಹದಲ್ಲಿನ ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ತರಕಾರಿ ಯಾವುದು…?

ಕಳಚಿ ಬಿತ್ತು ತೆಂಕು ತಿಟ್ಟಿನ ಯಕ್ಷಗಾನ ಪರಂಪರೆಯ ಹಿರಿಯ ಕೊಂಡಿ