ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಾನವ ಹಕ್ಕುಗಳ ಆಯೋಗ ವತಿಯಿಂದ ಆಯೋಜಿಸಲಾಗಿದ್ದ ಸಿಡಿಎಸ್ ಬಿಪಿನ್ ರಾವತ್ ಶ್ರದ್ಧಾಂಜಲಿ ಕಾರ್ಯಕ್ರಮ ಇತ್ತೀಚೆಗೆ ಮಂಗಳೂರಿನ ಬಲ್ಲಾಳ್ ಪಾರ್ಕ್ ವೃತ್ತದಲ್ಲಿ ನಡೆಯಿತು. ಕ್ಯಾಂಡಲ್ ಹಿಡಿದು ವೃತ್ತದ ಬಳಿ ದೇಶಾಭಿಮಾನಿಗಳು ಬಿಪಿನ್ ರಾವತ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಮಾನವ ಹಕ್ಕುಗಳ ಆಯೋಗದ ಜಿಲ್ಲಾ ಅಧ್ಯಕ್ಷ ಥೋಮಸ್ ಡಿಸೋಜಾ ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲಿಯಾನ್, ಮಾಜಿ ಉಪ ಮೇಯರ್ ಮೊಹಮ್ಮದ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರಜನೀಶ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುರೇಂದ್ರ ಶೆಣೈ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಯೋಗೀಶ್ ನಾಯ್ಕ್, ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಗಣೇಶ್ ಬಲ್ಲಾಳ್ ಬಾಗ್, ದಯಾನಂದ ಶೆಟ್ಟಿ, ಸಮರ್ಥ್ ಭಟ್, ನಿರಂಜನ್, ಎಸ್‌ಡಿಎಂ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.