ಕ್ರೈಂ

ಮಂಗಳೂರು: ಹಾಡಹಗಲೇ ಮತ್ತೊಂದು ಕೊಲೆ, ಮುಸುಕುಧಾರಿ ವ್ಯಕ್ತಿಗಳಿಂದ ಕೃತ್ಯ

ನ್ಯೂಸ್ ನಾಟೌಟ್: ಕರಾವಳಿಯನ್ನು ಬೆಚ್ಚಿ ಬೀಳಿಸುವಂತಹ ಮತ್ತೊಂದು ಭೀಕರ ಕೊಲೆ ಪ್ರಕರಣ ಶುಕ್ರವಾರ ಸಂಜೆ ಮಂಗಳೂರಿನ ಬಲ್ಮಠ ಬಳಿ ನಡೆದಿದೆ.

ವ್ಯಕ್ತಿಯೊಬ್ಬರಿಗೆ ಚೂರಿ ಇರಿತವಾಗಿದ್ದು ರಕ್ತದ ಮಡುವಿನಲ್ಲಿ ಬಿದ್ದು ಆತ ಸಾವಿಗೀಡಾಗಿದ್ದಾನೆ. ಮೃತ ವ್ಯಕ್ತಿ ಹಂಪನಕಟ್ಟೆಯ ಜ್ಯುವೆಲ್ಲರಿ ಶಾಪ್‌ನ ಸಿಬ್ಬಂದಿ ಎಂದು ಹೇಳಲಾಗಿದೆ. ಇಬ್ಬರು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗುದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಮೃತ ವ್ಯಕ್ತಿಯನ್ನು ಅತ್ತಾವರ ನಿವಾಸಿ ರಾಘವೇಂದ್ರ (೫೦) ಎಂದು ಗುರುತಿಸಲಾಗಿದೆ. ಈತನ ಹತ್ಯೆಯನ್ನು ಯಾವ ಕಾರಣಕ್ಕೆ ಮಾಡಲಾಗಿದೆ ಅನ್ನುವುದು ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಉಪ್ಪಿನಂಗಡಿ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮಲಗಿದಲ್ಲೇ ದಿಢೀರ್ ಸಾವು! ಹೃದಯಾಘಾತ ಶಂಕೆ!

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶದ ಆಸೆ ತೋರಿಸಿ ಅತ್ಯಾಚಾರ..! ಅಡಿಷನ್‌ ಗೆಂದು ಯುವತಿಯನ್ನು ಮನೆಗೆ ಕರೆದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು..!

ಮೈಸೂರಿನಲ್ಲಿ ಕೇರಳ ಉದ್ಯಮಿಯ ಕಾರು ಅಡ್ಡಗಟ್ಟಿ ದರೋಡೆ ಪ್ರಕರಣ, ಇಂದು(ಜ.21) ಎರಡೂ ಕಾರುಗಳು ಪತ್ತೆ..!