ನ್ಯೂಸ್ ನಾಟೌಟ್: ‘ಮದುವೆಯಾಗಲು ಹುಡುಗಿ ಸಿಗದ ಹಿಂದೂ ಹುಡುಗರು ಅನ್ಯಧರ್ಮೀಯ ಯುವತಿಯರನ್ನು ಪ್ರೀತಿಸಿ ವಿವಾಹವಾಗಿ’ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿಕೆ ನೀಡಿದ್ದಾರೆ.
ವಿಶ್ವ ಹಿಂದೂ ಪರಿಷತ್ ವತಿಯಿಂದ ಭಾನುವಾರ(ಮಾ.9) ಮಂಗಳೂರಿನ ಕದ್ರಿ ಮಂಜುನಾಥ ಕ್ಷೇತ್ರದಿಂದ ಕುತ್ತಾರಿನ ಕೊರಗಜ್ಜನ ಆದಿಕ್ಷೇತ್ರಕ್ಕೆ ನಡೆದ ‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಪಾದಯಾತ್ರೆಯ ಸಮಾರೋಪದಲ್ಲಿ ಪಾಲ್ಗೊಂಡು ಮಾತನಾಡಿದ ಚಕ್ರವರ್ತಿ ಸೂಲಿಬೆಲೆ, ‘ಮತಾಂತರ, ಲವ್ ಜಿಹಾದ್ ವಿಚಾರಗಳನ್ನು ಬಿಟ್ಟು ಬಿಡಿ. ಹಿಂದೂಧರ್ಮದಿಂದ ಮತಾಂತರವಾದವರನ್ನ ಮತ್ತೆ ‘ಘರ್ ವಾಪಸಿ’ ಮಾಡುವುದು ಹೇಗೆಂದು ನಮ್ಮ ಯುವಕರನ್ನ ತರಬೇತುಗೊಳಿಸಿ ಎಂದಿದ್ದಾರೆ.
“ಈಗ ಟೆಸ್ಟ್ ಮ್ಯಾಚ್ ಗಳು ನಿಂತು ಹೋಗಿವೆ. ಇರುವ ಇಪ್ಪತ್ತು ಓವರ್ ಗಳಲ್ಲೇ ಬಡಿಯಬೇಕು. ಈ ಸವಾಲುಗಳನ್ನ ಎದುರಿಸಲು ಸಜ್ಜಾಗಬೇಕು. ಮದುವೆಯಾಗಲು ಹುಡುಗಿ ಸಿಗದ ಹಿಂದೂ ಹುಡುಗರು ಅನ್ಯಧರ್ಮೀಯ ಯುವತಿಯರನ್ನು ಪ್ರೀತಿಸಿ ವಿವಾಹವಾಗಿ’ ಎಂದಿದ್ದಾರೆ.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಕುರಿತು ಟೀಕಿಸಿದ ಅವರು, ‘ಹಿಂದುತ್ವವನ್ನು ಗೌರವಿಸುವ ಜನಪ್ರತಿನಿಧಿಗಳು ನಾಡನ್ನು ಆಳಿದಾಗ ಹಿಂದೂ ಧರ್ಮ ಉಳಿಯಲು ಸಾಧ್ಯ. ವಕ್ಫ್ ವಿರುದ್ಧ ದೇಶದೆಲ್ಲೆಡೆ ಹೋರಾಟ ನಡೆಯುತ್ತಿರುವಾಗ ರಾಜ್ಯ ಸರ್ಕಾರ, ವಕ್ಫ್ ಆಸ್ತಿಯ ನವೀಕರಣಕ್ಕೆ 150 ಕೊಟಿ ನೀಡಲು ಹೊರಟಿದೆ. ಪ್ರಚೋದನೆ ನೀಡಿ ಪ್ರತ್ಯೇಕತೆಯನ್ನು ಹುಟ್ಟುಹಾಕುವ ಪ್ರಯತ್ನಕ್ಕೆ ಮುಂದಾಗಿದೆ’ ಎಂದಿದ್ದಾರೆ.