ಮಂಗಳೂರು: ಕಚೇರಿಯ ಮಹಿಳಾ ಸಿಬ್ಬಂದಿ ಜತೆಗೆ ಕಾಮುಕತನ ಪ್ರದರ್ಶಿಸಿರುವ ಡಾ ರತ್ನಾಕರ್ ಈಗ ಪೊಲೀಸ್ ಅತಿಥಿಯಾಗಿದ್ದಾನೆ. ಈತನ ಕಾಮಕಾಂಡದ ವಿಡಿಯೋ. ಫೋಟೋ ವೈರಲ್ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಈತನ ವಿರುದ್ಧ ನೀಡಿದ ದೂರಿನ ಅನ್ವಯ ಮಂಗಳೂರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಡಾ.ರತ್ನಾಕರನನ್ನು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.