ಕರಾವಳಿಕ್ರೈಂ

ಮಂಗಳೂರು: ಕರಿಮಣಿ ಎಗರಿಸಿ 23 ವರ್ಷಗಳಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದವ ಅರೆಸ್ಟ್‌..ಪೊಲೀಸರ ಕೈಗೆ ಆತ ಸಿಕ್ಕಿಬಿದ್ದದ್ದು ಹೇಗೆ..?

312

ನ್ಯೂಸ್ ನಾಟೌಟ್: ಸುಲಿಗೆ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದವ 23 ವರ್ಷಗಳಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದವ ಕೊನೆಗೂ ಈಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಉಳ್ಳಾಲ ನಿವಾಸಿ ಯು.ಎಂ.ಬಶೀರ್(51) ಬಂಧಿತ ಆರೋಪಿ. 2000ರ ಡಿಸೆಂಬರ್ 17ರಂದು ರಾತ್ರಿ 8:45ರ ಸುಮಾರಿಗೆ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಆರೋಪಿ ಚೂರಿ ತೋರಿಸಿ ಕತ್ತಿಲ್ಲಿದ್ದ ಕರಿಮಣಿ ಸರವನ್ನು ಕಸಿದು ಸುಲಿಗೆ ಮಾಡಿ ಪರಾರಿಯಗಿದ್ದ. ಈ ಪ್ರಕರಣಕ್ಕೆ ಸಂಬಂದಿಸಿದಂತೆ, ಉರ್ವ ಪೊಲೀಸ್ ಠಾಣೆಯಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈತನ ವಿರುದ್ಧ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಆದರೆ ಆರೋಪಿ ಯು.ಎಂ.ಬಶೀರ್ ನ್ಯಾಯಾಲಯಕ್ಕೂ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆದರೆ ಬುಧವಾರ ಆರೋಪಿಯನ್ನು ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದಾರೆ.

See also  ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷೆ..? ಹಿಂದೂ ಧಾರ್ಮಿಕ ಟ್ರಸ್ಟ್ ಗಳಲ್ಲಿ ಹಿಂದೂಯೇತರರನ್ನು ನೇಮಿಸದಂತೆ ತಿಳಿಸಿದ ಕೇಂದ್ರ ಸಚಿವ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget