ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದಿದ್ದ ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ ಎಂದು ಸರಕಾರ ಹೈಕೋರ್ಟ್ ಗೆ ತಿಳಿಸಿದೆ. ಗೋಲಿಬಾರ್ ಘಟನೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಮಿ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಶುಕ್ರವಾರ ಈ ಮಾಹಿತಿ ನೀಡಿದೆ.