Latestಕರಾವಳಿಕ್ರೈಂಮಂಗಳೂರು

ಮಂಗಳೂರು :ಈ ಹಿಂದಿನ ಪೊಲೀಸ್ ಕಮಿಷನರ್ ಮತ್ತು ಎಸ್ಪಿ ವಿರುದ್ಧ ಉನ್ನತ ಮಟ್ಟದ ತನಿಖೆಗೆ ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ ಎಂದ ಯು.ಟಿ.ಖಾದರ್..! ಏನಿದು ಆರೋಪ..?

1.3k

ನ್ಯೂಸ್ ನಾಟೌಟ್: ದ.ಕ. ಜಿಲ್ಲೆಯಲ್ಲಿ ನಡೆದಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಹಿಂದೆ ಇದ್ದ ಪೊಲೀಸ್ ಕಮಿಷನರ್ ಹಾಗೂ ಎಸ್ಪಿ ವಿರುದ್ಧ ಉನ್ನತ ಮಟ್ಟದ ತನಿಖೆ ಆಗಬೇಕು. ಈ ಬಗ್ಗೆ ಗೃಹ ಸಚಿವರಿಗೆ ಪತ್ರ ಬರೆದು ಒತ್ತಾಯ ಮಾಡುವುದಾಗಿ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಸ್ಪೀಕರ್, “ಎಲ್ಲ ಐಪಿಎಸ್ ಅಧಿಕಾರಿಗಳ ಡಿಗ್ರಿ ಒಂದೇ ಆಗಿರುತ್ತದೆ. ಆದರೆ ದ.ಕ. ಜಿಲ್ಲೆಗೆ ಬರುವ ಅಧಿಕಾರಿಗಳು ಕೋಮು ದ್ವೇಷ, ಪ್ರಚೋದನಕಾರಿ ಭಾಷಣ, ಸಾಮಾಜಿಕ ಜಾಲ ತಾಣಗಳಲ್ಲಿ ದ್ವೇಷ ಹರಡುವವರ ವಿರುದ್ಧ ಒಂದೊಂದು ಸ್ಟೈಲ್ನಲ್ಲಿ ಆಡಳಿತ ಮಾಡುತ್ತಾರೆ. ಈ ನಿಟ್ಟಿನಲ್ಲಿ ಹಿಂದಿನ ಅಧಿಕಾರಿಗಳ ವಿರುದ್ಧ ತನಿಖೆ ಆಗಬೇಕು” ಎಂದಿದ್ದಾರೆ.

“ಯಾರಿಗೂ ಪ್ರಚೋದನಕಾರಿ ಹೇಳಿಕೆಗೆ ಅವಕಾಶ ನೀಡಬಾರದು. ಹಜ್ ಯಾತ್ರೆಗೆ ಹೋಗುವ ಮುನ್ನ ಕಮೀಷನರ್, ಎಸ್ಪಿಗೂ ಹೇಳಿದ್ದೆ. ದ್ವೇಷ ಭಾಷಣ, ಪ್ರಚೋದನಕಾರಿ ಬರಹ ಬರೆಯುವವರ ವಿರುದ್ದ ಕ್ರಮ ಕೈಗೊಳ್ಳಲು ಸ್ಪಷ್ಟವಾಗಿ ತಿಳಿಸಿದ್ದೆ.

ಆಗ ಅವರು ಅಸಹಾಯಕತೆ ವ್ಯಕ್ತಪಡಿಸಿದ್ದರು. ಕಾನೂನು ಸರಳ ಅಂತಾ ಎಲ್ಲಾ ಹೇಳಿದ್ದರು. ಆಗ ನೀವು ಪೊಲೀಸರ ಕೆಲಸ ಮಾಡಿ, ಅದು ಬಿಟ್ಟು ವಕೀಲರು ಅಥವಾ ನ್ಯಾಯಾಧೀಶರ ಕೆಲಸ ಮಾಡಬೇಡಿ ಎಂದು ಹೇಳಿದ್ದೆ. ಈಗ ನೂತನವಾಗಿ ಬಂದವರು ಕಠಿಣ ಕ್ರಮಕೈಗೊಂಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ದ್ವೇಷ, ಪ್ರಚೋದನಕಾರಿ ಪೋಸ್ಟ್ ಗಳು ಶೇ.60ರಷ್ಟು ಎಲ್ಲವೂ ಸರಿಯಾಗಿದೆ” ಎಂದು ಯು.ಟಿ ಖಾದರ್ ಹೇಳಿದ್ದಾರೆ.

ಸೌತಡ್ಕ ಶ್ರೀ ಮಹಾಗಣಪತಿಗೆ 75 ಕೆ.ಜಿ ತೂಕದ ಗಂಟೆ ಸಮರ್ಪಣೆ, ಪುತ್ತೂರಿನ ಉದ್ಯಮಿಯಿಂದ ಹರಕೆ ಸಲ್ಲಿಕೆ

ಗಂಡನ ಹತ್ಯೆ ಆರೋಪಿಯನ್ನು ತಾನೇ ಪತ್ತೆ ಹಚ್ಚಿದ ಹೆಂಡತಿ..! ಪೊಲೀಸರಿಂದ ಶ್ಲಾಘನೆ..!

See also  ಫಾಜಿಲ್ ಅಂತ್ಯಸಂಸ್ಕಾರಕ್ಕೆ ಸಿದ್ಧತೆ,  ಸಾವಿರಾರು ಜನರಿಂದ ಅಂತಿಮ ದರ್ಶನ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget