ಕರಾವಳಿಕ್ರೈಂಮಂಗಳೂರುವೈರಲ್ ನ್ಯೂಸ್

ಮಂಗಳೂರಿನ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ ಕೇಸ್ ಪತ್ತೆ..! 6 ಕೋಟಿ ರೂಪಾಯಿಯ ಡ್ರಗ್ಸ್ ವಶಕ್ಕೆ, ನೈಜಿರಿಯಾ ಪ್ರಜೆ ಬಂಧನ..!

ನ್ಯೂಸ್ ನಾಟೌಟ್: ಮಂಗಳೂರು ನಗರದ ಸಿಸಿಬಿ ಪೊಲೀಸರು ಬೃಹತ್‌ ಡ್ರಗ್‌ ಜಾಲವೊಂದನ್ನು ಪತ್ತೆ ಮಾಡಿದ್ದಾರೆ. ಬರೋಬ್ಬರಿ 6 ಕೋಟಿ ರೂ ಮೌಲ್ಯದ ಎಂಡಿಎಂಎ ಡ್ರಗ್ ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ ವಶ ಕೇಸ್ ಇದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿದ್ದ ನೈಜಿರಿಯಾ ಪ್ರಜೆ ಪೀಟರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ಎಂಡಿಎಂಎ ಮಾರಾಟ ವೇಳೆ ಹೈದರ್‌ ಅಲಿ ಎಂಬಾತನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಈತ ಮಾಹಿತಿ ಆಧಾರದಲ್ಲಿ‌ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರ ತಂಡವು ಬೆಂಗಳೂರಿಗೆ ತೆರಳಿ ವಿತರಣೆಗೆ ಸಿದ್ಧವಾಗಿದ್ದ ಡ್ರಗ್ಸ್‌ ವಶಕ್ಕೆ ಪಡೆದಿದೆ. ಸುಮಾರು 6 ಕೆ.ಜಿ‌ ಎಂಡಿಎಂಎ ಡ್ರಗ್ ವಶಕ್ಕೆ ಪಡೆಯಲಾಗಿದೆ.

ಹೈದರ್ ಅಲಿಯಿಂದ ಮಂಗಳೂರಿನಲ್ಲಿ 75,000 ರೂ ಮೌಲ್ಯದ 15 ಗ್ರಾಂ ಮಾದಕ ವಸ್ತು ಎಂಡಿಎಂಎ ನ್ನು ಸ್ವಾಧೀನಪಡಿಸಿಕೊಂಡು ಆತನ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಂಗಳೂರಿನ ವಿವೇಕಾನಂದ ನಗರದ ಬಾಡಿಗೆ ಮನೆಯಲ್ಲಿದ್ದ ಪೀಟರ್‌ ಅಕೆಡಿ ಬೆಲನೋವು ಎಂಬಾತನನ್ನು ಪತ್ತೆ ಹಚ್ಚಿ ಆತನ ಮನೆಯಲ್ಲಿ ದಾಸ್ತಾನು ಇರಿಸಿದ್ದ ಒಟ್ಟು 6 ಕೋಟಿ ಮೌಲ್ಯದ 6.310 ಕೆಜಿ ಎಂಡಿಎಂಎ, 3 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪಕ, ಒಟ್ಟು 35 ಎಟಿಎಂ/ಡೆಬಿಟ್ ಕಾರ್ಡ್ ಗಳು, 17 ಇನ್ ಅಕ್ಟಿವ್ ಸಿಮ್ ಕಾರ್ಡ್ ಗಳು, 10 ವಿವಿಧ ಬ್ಯಾಂಕ್ ಗಳ ಬ್ಯಾಂಕ್ ಖಾತೆ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು 6,00,63,500ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Click

https://newsnotout.com/2024/10/mangaluru-kannada-news-mumthaj-ali-kannada-news-fir-kannada-news/
https://newsnotout.com/2024/10/viral-video-school-students-kannada-news-viral-news-issue/
https://newsnotout.com/2024/10/ratan-tata-kannada-news-icu-treatment-kannada-news/
https://newsnotout.com/2024/10/alone-women-kannada-news-briton-court-theef-viral-news/

Related posts

ಸರ್ಕಾರಿ ನಿವಾಸದಲ್ಲಿ ಅಯೋಧ್ಯೆಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಶವವಾಗಿ ಪತ್ತೆ..! ಮೃತದೇಹ ಪತ್ತೆಯಾದ ಕೋಣೆಯ ನೆಲದ ಮೇಲೆ ರಕ್ತದ ಕಲೆಗಳು..!

ಕಾಲು ಜಾರಿ ಜಲಪಾತಕ್ಕೆ ಬಿದ್ದಿದ್ದ ಯುವಕನ ಶವ ಪತ್ತೆಗೆ ಮುಂದಾದ ಉಡುಪಿಯ ಸಾಹಸಿ..! ಆಪತ್ಬಾಂಧವನಿಗೂ ಎದುರಾಯ್ತಾ ಅಪಾಯ? ಅಷ್ಟಕ್ಕೂ ಅಲ್ಲಿ ನಡೆದದ್ದೇನು?

ಅಪ್ರಾಪ್ತ ಬಾಲಕಿಯ ಕೈ ಹಿಡಿದು ಎಳೆದವನಿಗೆ ಜೈಲು ಶಿಕ್ಷೆ