ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ (SCDCC) ಭಾರೀ ಅಕ್ರಮ ಶಂಕೆ ವ್ಯಕ್ತವಾದ ಬೆನ್ನಲ್ಲೇ ಭಾರತೀಯ ರಿಸರ್ವ್ ಬ್ಯಾಂಕ್ 5 ಲಕ್ಷ ರೂ. ದಂಡ ವಿಧಿಸಿದೆ. ಅಲ್ಲದೇ ಕಾನೂನು ಕ್ರಮದ ಎಚ್ಚರಿಕೆಯನ್ನೂ ನೀಡಿದೆ.
ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅಧ್ಯಕ್ಷತೆಯ ಮಂಗಳೂರು ಡಿಸಿಸಿ ಬ್ಯಾಂಕ್ ಆರ್ ಬಿಐ ನಿಯಮ ಉಲ್ಲಂಘಿಸಿ ತನ್ನ ನಿರ್ದೇಶಕರಿಗೆ ಸಾಲ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. ಇದು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, 1949ರ ಸೆಕ್ಷನ್ 20 ಮತ್ತು 56ನ ನಿಯಮ ಉಲ್ಲಂಘನೆಯಾಗಿದೆ.
ಆದ್ದರಿಂದ RBI ಸೆಕ್ಷನ್ 47A(1)(c), 46(4)(i), ಮತ್ತು 56 ಅನುಸಾರ ದಂಡ ವಿಧಿಸಿದೆ. 2023ರ ಮಾರ್ಚ್ 31ರಲ್ಲಿ ನಬಾರ್ಡ್ ಡಿಸಿಸಿ ಬ್ಯಾಂಕಿನ ಹಣಕಾಸು ಸ್ಥಿತಿಯ ಪರಿಶೀಲನೆ ಮಾಡಿತ್ತು. ಪರಿಶೀಲನೆ ಸಂದರ್ಭದಲ್ಲಿ ನಿಯಮ ಉಲ್ಲಂಘನೆಯ ಬಗ್ಗೆ ಸಾಕ್ಷ್ಯಗಳು ಲಭ್ಯವಾಗಿದ್ದವು. ಆ ಬಳಿಕ ಮಂಗಳೂರು ಡಿಸಿಸಿ ಬ್ಯಾಂಕ್ಗೆ ಆರ್ಬಿಐ ನೋಟೀಸ್ ಕೂಡ ನೀಡಿತ್ತು.