Latestಕರಾವಳಿಕ್ರೈಂಮಂಗಳೂರು

ಮಂಗಳೂರು: ಲಕೋಟೆಯಲ್ಲಿ ಸಂಸ್ಕರಿಸಿದ ಮಾನವನ ಅಸ್ಥಿಗಳು ಪತ್ತೆ..! ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು..!

695

ನ್ಯೂಸ್‌ ನಾಟೌಟ್: ಲಕೋಟೆಯೊಂದರಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಮಂಗಳೂರಿನ ಕುಂಪಲ ಚಿತ್ರಾಂಜಲಿ ನಗರದಲ್ಲಿ ಶನಿವಾರ(ಮಾ.29) ರಾತ್ರಿ ಪತ್ತೆಯಾಗಿದ್ದು, ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶನಿವಾರ ನಡುರಾತ್ರಿ ಚಿತ್ರಾಂಜಲಿ ನಗರದ ಮನೆಯ ಆವರಣದ ಬಳಿ ಪ್ರಯೋಗಾಲಯದ ಮಾದರಿಯ ಅಸ್ಥಿಗಳು ಲಕೋಟೆಯಲ್ಲಿ ಸಂಸ್ಕರಿಸಿದ ರೀತಿಯಲ್ಲಿ ಪತ್ತೆಯಾಗಿದೆ. ಈ ಸುದ್ದಿ ತಿಳಿದ ಜನರು ಘಟನಾ ಸ್ಥಳಕ್ಕೆ ಜಮಾಯಿಸಿದ್ದರು. ಈ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಉಳ್ಳಾಲ ಪೊಲೀಸರು ಅಸ್ಥಿಗಳು ತುಂಬಿದ್ದ ಲಕೋಟೆಯನ್ನು ವಶಕ್ಕೆ ಪಡೆದಿದ್ದಾರೆ.

ಚಿತ್ರಾಂಜಲಿ ನಗರದಲ್ಲಿ ದೊರೆತ ಅಸ್ಥಿಗಳನ್ನು ಸ್ಥಳೀಯ ಮಹಿಳೆಯೇ ತನ್ನ ಮನೆಯ ಆವರಣದ ಬಳಿ ಎಸೆದಿರುವ ವಿಚಾರ ಪೊಲೀಸರ ವಿಚಾರಣೆಯಲ್ಲಿ ತಿಳಿದು ಬಂದಿದೆ.

ಮಹಿಳೆಯು ಮಂಗಳೂರಿನ ವೈದ್ಯರೋರ್ವರ ಮನೆಯಲ್ಲಿ ಕೆಲಸಕ್ಕಿದ್ದು, ನಿವೃತ್ತಿ ಹೊಂದಿದ್ದ ವೈದ್ಯರು ಮನೆ ಬಿಟ್ಟು ಹೋದಾಗ ಮನೆಯಲ್ಲಿದ್ದ ಕೆಲ ಸಾಮಗ್ರಿಗಳನ್ನು ಮಹಿಳೆ ತಂದಿದ್ದರೆನ್ನಲಾಗಿದೆ. ವೈದ್ಯರ ಮನೆಯಿಂದ ತಂದ ಸಂಸ್ಕರಿಸಿಡಲಾದ ಅಸ್ಥಿಗಳ ಲಕೋಟೆಯನ್ನು ಮಹಿಳೆಯು ತನ್ನ ಮನೆಯ ಕಾಂಪೌಡ್ ಬಳಿ ಎಸೆದಿದ್ದರೆನ್ನಲಾಗಿದೆ.

ಇದನ್ನೂ ಓದಿಫ್ಲೈ ಓವರ್ ​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್..! ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ..!

ಸೌದಿ ಅರೇಬಿಯಾದ ಮಸೀದಿ ಎದುರು ಮಹಿಳೆ ಮತ್ತು ಭದ್ರತಾ ಸಿಬ್ಬಂದಿ ನಡುವೆ ಪರಸ್ಪರ ಕಪಾಳಮೋಕ್ಷ..! ವಿಡಿಯೋ ವೈರಲ್

 

See also  ಮಗಳನ್ನು ಮಂಗಳೂರು ಏರ್‌ಪೋರ್ಟ್‌ಗೆ ಬಿಟ್ಟು ಬರಲು ತೆರಳಿದ ಕುಟುಂಬ! ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget