Latestಕರಾವಳಿಕ್ರೈಂಮಂಗಳೂರುವೈರಲ್ ನ್ಯೂಸ್

ಮಂಗಳೂರು: ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನಿಸಿದ ಇಬ್ಬರು ಅರೆಸ್ಟ್..! ಕಳ್ಳರು ಬೀಗ ಒಡೆಯುತ್ತಿರುವಾಗ ಮೊಳಗಿದ ಸೈರನ್..!

975

ನ್ಯೂಸ್‌ ನಾಟೌಟ್: ಮಂಗಳೂರಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆ ಜಂಕ್ಷನ್ ನ ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನಿಸಿದ ಘಟನೆ ಶನಿವಾರ(ಮಾ.29) ತಡರಾತ್ರಿ ನಡೆದಿದೆ.

ಕಳ್ಳರು ಬೀಗ ಒಡೆಯುತ್ತಿರುವಾಗಲೇ ಫೈನಾನ್ಸ್ ಮಳಿಗೆಯ ಸೈರನ್ ಮೊಳಗಿದ್ದು, ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ದೇರಳಕಟ್ಟೆ ಜಂಕ್ಷನ್ ನಲ್ಲಿರುವ ಹೆಚ್.ಎಮ್ ಟಿಂಬರ್ಸ್ ಸಂಸ್ಥೆಗೆ ಸೇರಿದ ವಾಣಿಜ್ಯ ಕಟ್ಟಡದ ಮೇಲಂತಸ್ತಿನಲ್ಲಿ ಕಾರ್ಯಾಚರಿಸುತ್ತಿರುವ ಮುತ್ತೂಟ್ ಫೈನಾನ್ಸ್ ಗೆ ಕೇರಳ ಮೂಲದ ಮೂವರು ದರೋಡೆಕೋರರು ಬಂದಿರುವುದು ತಿಳಿದಿದೆ. ಇನ್ನೇನು ಕಳ್ಳತನ ನಡೆಸಲು ಮಳಿಗೆಯ ಬೀಗ ಒಡೆಯುತ್ತಿರುವಾಗಲೇ ಸೈರನ್ ಮೊಳಗಿದ್ದು ಮುತ್ತೂಟ್ ಫೈನಾನ್ಸ್ ನ ಕಂಟ್ರೋಲ್ ರೂಂಗೆ ಮಾಹಿತಿ ರವಾನೆಯಾಗಿದೆ. ಫೈನಾನ್ಸ್ ನ ಮೇಲಾಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನೆ ಸ್ಥಳದಲ್ಕಿ ಸೈರನ್ ಮೊಳಗುತ್ತಿದ್ದಾಗಲೇ ಫೈನಾನ್ಸ್ ಸುತ್ತ ಮುತ್ತಲೂ ಸ್ಥಳೀಯರು ಜಮಾಯಿಸಿದ್ದು ಇಬ್ಬರು ಆರೋಪಿಗಳಾದ ಕಾಂಞಂಗಾಡ್ ನ ಮುರಳಿ ಮತ್ತು ಕಾಸರಗೋಡಿನ ಹರ್ಷದ್ ಕಟ್ಟಡದಲ್ಲಿ ಬಂಧಿಯಾಗಿದ್ದರು. ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳು ಮತ್ತು ಕೃತ್ಯ ಎಸಗಲು ತಂದಿದ್ದ ಡ್ರಿಲ್ ಮೆಷಿನನ್ನು ವಶಕ್ಕೆ ಪಡೆದಿದ್ದಾರೆ. ಮತ್ತೋರ್ವ ಆರೋಪಿ ಕಾಸರಗೋಡು ಮೂಲದ ಅಬ್ದುಲ್ ಲತೀಫ್ ಪರಾರಿಯಾಗಿದ್ದಾನೆ.

ದೇರಳಕಟ್ಟೆಯ ಮುತ್ತೂಟ್ ಫೈನಾನ್ಸ್ ನಲ್ಲಿ ಉತ್ಕೃಷ್ಟ ಮಟ್ಟದ ರಕ್ಷಣಾ ಸಲಕರಣೆ ಅಳವಡಿಸಿದ ಪರಿಣಾಮ ಸಂಭವನೀಯ ದರೋಡೆ ತಪ್ಪಿದೆ.

ಇದನ್ನೂ ಓದಿ:ಉಚ್ಚಾಟನೆ ನಿರ್ಧಾರ ಮರುಪರಿಶೀಲನೆ ಮಾಡಲು ಒತ್ತಾಯವನ್ನೂ ಮಾಡುವುದಿಲ್ಲ ಎಂದ ಯತ್ನಾಳ್..! ನನ್ನ ಉಚ್ಛಾಟನೆಗೆ ಕಾರಣಕರ್ತರಾದವರು ನಾಶವಾಗುತ್ತಾರೆ ಎಂದ ಉಚ್ಚಾಟಿತ ಶಾಸಕ..!

 

See also  ಸುಳ್ಯ:ಚಂದ್ರಯಾನ -3 ಪರಿಕಲ್ಪನೆಯಲ್ಲಿ ಆಕರ್ಷಕ ಗೂಡುದೀಪದ ರಚನೆ..!,ಅಡ್ಕಾರಿನ ‘ವೈಫೈ ಗೆಳೆಯರ’ ಬಳಗದ ವಿನೂತನ ಪ್ರಯೋಗಕ್ಕೆ ಭಾರಿ ಮೆಚ್ಚುಗೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget