Latestಕರಾವಳಿಕ್ರೈಂದೇಶ-ವಿದೇಶಮಂಗಳೂರು

ಮಂಗಳೂರು: ಪಹಲ್ಗಾಮ್ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್ ಹಾಕಿದವನ ವಿರುದ್ಧ ಪ್ರಕರಣ ದಾಖಲು..! ಆರೋಪಿಗಾಗಿ ಹುಡುಕಾಟ

1.5k

ನ್ಯೂಸ್ ನಾಟೌಟ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ಉಗ್ರರ ದಾಳಿಯನ್ನು ಸಮರ್ಥಿಸಿಕೊಂಡು ಕಿಡಿಗೇಡಿಯೊಬ್ಬ ಫೇಸ್‍ ಬುಕ್‍ ನಲ್ಲಿ ಪೋಸ್ಟ್ ಹಾಕಿ ವಿಕೃತಿ ಮೆರೆದಿರುವುದು ಮಂಗಳೂರಿನಲ್ಲಿ ಇಂದು(ಎ.25) ನಡೆದಿದೆ.

ನಚ್ಚು ಮಂಗಳೂರು ಫೇಸ್‍ ಬುಕ್ ಪೇಜ್‍ ನಲ್ಲಿ, ಉಗ್ರರ ಕೃತ್ಯಕ್ಕೆ ಬೇರೆಯೇ ವ್ಯಾಖ್ಯಾನ ಮಾಡಲಾಗಿದೆ. 2023ರಲ್ಲಿ ಮಹಾರಾಷ್ಟದ ಪಾಲ್ಗರ್‌ ನಲ್ಲಿ ಮೂವರು ಮುಸ್ಲಿಮರನ್ನು ಕೊಲ್ಲಲಾಗಿತ್ತು. ಅದರ ಆರೋಪಿ ಚೇತನ್ ಸಿಂಗ್ ಗೆ ಸಾರ್ವಜನಿಕವಾಗಿ ಹಗ್ಗ ಹಾಕಲಿಲ್ಲ. ಆ ಕಾರಣಕ್ಕೆ ಕಾಶ್ಮೀರದಲ್ಲಿ ಈ ಕೃತ್ಯ ನಡೆದಿದೆ. ಪಾಲ್ಗರ್ ಘಟನೆಯಿಂದಾಗಿ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಸಮರ್ಥನೆ ಮಾಡಿಕೊಂಡಿದ್ದಾನೆ.

ಪೋಸ್ಟ್ ಹಾಕಿದ ನಿಚ್ಚು ಮಂಗಳೂರು ಫೇಸ್‍ ಬುಕ್ ಪೇಜ್ ವಿರುದ್ಧ ಉಳ್ಳಾಲದ ಸತೀಶ್ ಕುಮಾರ್ ದೂರು ನೀಡಿದ್ದಾರೆ. ಈ ಸಂಬಂಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಬಿಎನ್‍ಎಸ್ ಸೆಕ್ಷನ್ 192 ಮತ್ತು 353 (1) (ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್‍ ಬುಕ್ ಪೇಜ್ ಡಿಪಿಯಲ್ಲಿರುವ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ ಆರಂಭಿಸಿದ್ದಾರೆ.

ಆರೋಪಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಎನ್ನಲಾಗಿದೆ.

‘ಜವನೆರೆ ಕಲ’ ಮಂಗಳೂರು ಆಕಾಶವಾಣಿ ಫೋನ್ ಇನ್ ಕಾರ್ಯಕ್ರಮ, ಸಾಮಾಜಿಕ ಜಾಲತಾಣದ ಬಗ್ಗೆ ಮನಮುಟ್ಟುವ ಕಾರ್ಯಕ್ರಮ ನೀಡಿದ ನ್ಯೂಸ್ ನಾಟೌಟ್’ ಸಿಬ್ಬಂದಿ ದಿನೇಶ್ ಎಂ

ಲಷ್ಕರ್ ಸಂಘಟನೆಯ ಕಮಾಂಡರ್ ಅಲ್ತಾಫ್ ಹತ್ಯೆ!ಬಂಡಿಪೋರಾ ಎನ್ ಕೌಂಟರ್ ನಲ್ಲಿ ಅಲ್ತಾಫ್ ಲಲ್ಲಿ ಫಿನಿಶ್!

 

See also  ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ ಪ್ರಕರಣಕ್ಕೆ ಟ್ವಿಸ್ಟ್..! ಮೊಬೈಲ್ ಅಂಗಡಿ ಮಾಲೀಕ ಅರೆಸ್ಟ್..? ಸಿಮ್​ ಜಜ್ಜಿ ಟಾಯ್ಲೆಟ್ ಗೆ ಹಾಕಿದ್ದ ರೌಡಿಶೀಟರ್..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget