ನ್ಯೂಸ್ ನಾಟೌಟ್: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ, ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ವ್ಯಕ್ತಿಗಳ ಮನೆಗೆ ಪೊಲೀಸರು ಫೆ.29ರಂದು ದಿಢೀರ್ ಭೇಟಿ ನೀಡಿದ್ದಾರೆ. ಯಾವುದೇ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ನೀಡಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.