ನ್ಯೂಸ್ ನಾಟೌಟ್: ಮಸಾಜ್ ಪಾರ್ಲರ್ ಒಂದರ ಮೇಲೆ ರಾಮ್ ಸೇನಾ ಕರ್ನಾಟಕದ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಪ್ರಸಾದ್ ಅತ್ತಾವರ ನೇತೃತ್ವದ ಸಂಘಟನೆಯ ಹತ್ತು ಜನ ಕಾರ್ಯಕರ್ತರು ಬಿಜೈ ಕೆ.ಎಸ್.ಆರ್.ಟಿ.ಸಿ ಬಳಿಯ ಕಲರ್ಸ್ ಯೂನಿಸೆಕ್ಸ್ ಸೆಲೂನ್ ಮೇಲೆ ದಾಳಿ ನಡೆಸಿದ್ದಾರೆ. ಸೆಲೂನ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.
ದಾಳಿ ವೇಳೆ, ನಾಲ್ಕು ಜನ ಯುವತಿಯರು ಹಾಗೂ ಓರ್ವ ವ್ಯಕ್ತಿ ಸೆಲೂನ್‍ನಲ್ಲಿ ಇದ್ದರು ಎನ್ನಲಾಗಿದೆ. ನಗರದಾದ್ಯಂತ ಇರುವ ಮಸಾಜ್ ಸೆಂಟರ್ ಗಳನ್ನು ಮುಚ್ಚುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.