ಕರಾವಳಿಕ್ರೈಂಮಂಗಳೂರುವೈರಲ್ ನ್ಯೂಸ್

ಮಂಗಳೂರು: ಸ್ಕೂಟರ್ ಮತ್ತು ಟೆಂಪೊ ಮಧ್ಯೆ ಅಪಘಾತ..! ಆಸ್ಪತ್ರೆಗೆ ಸಾಗಿಸುವ ವೇಳೆ ದ್ವಿಚಕ್ರ ವಾಹನ ಸವಾರ ಸಾವು..!

ನ್ಯೂಸ್ ನಾಟೌಟ್: ದ್ವಿಚಕ್ರ ವಾಹನ ಮತ್ತು ಏಸ್ ಟೆಂಪೊ ನಡುವೆ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಡುಪದವು ಬಳಿ ಇಂದು(ಜ.17) ಬೆಳಗ್ಗೆ 10:30ರ ಸುಮಾರಿಗೆ ಸಂಭವಿಸಿದೆ.

ಮೃತರನ್ನು ಕೊಣಾಜೆ ಗ್ರಾಮದ ನಡುಪದವು ಕಾಟುಕೋಡಿ ನಿವಾಸಿ ಅಬೂಬಕರ್ ಸಿದ್ದೀಕ್(22) ಎಂದು ಗುರುತಿಸಲಾಗಿದೆ.

ದೇರಳಕಟ್ಟೆ ಕಡೆಯಿಂದ ತೆರಳುತ್ತಿದ್ದ ಸ್ಕೂಟರ್ ಮತ್ತು ಮುಡಿಪು ಕಡೆಯಿಂದ ತೊಕ್ಕೊಟ್ಟಿನತ್ತ ಬರುತ್ತಿದ್ದ ಏಸ್ ಟೆಂಪೊ ಮಧ್ಯೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಭಾಗಶಃ ಟೆಂಪೊದೊಳಗೆ ನುಗ್ಗಿದ್ದು, ನಜ್ಜುಗುಜ್ಜಾಗಿದೆ. ಈ ವೇಳೆ ಟೆಂಪೋದ ಮೇಲೆ ಎಸೆಯಲ್ಪಟ್ಟ ಅಬೂಬಕರ್ ಸಿದ್ದೀಕ್ ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಟೆಂಪೋ ಚಾಲಕ ಕೂಡಾ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Click

https://newsnotout.com/2025/01/forest-department-investigation-kannada-news-5-to-6-hour/

Related posts

ಪುತ್ತೂರು: ನಳಿನ್ ಕುಮಾರ್ ಕಟೀಲ್ ಮನೆಯಲ್ಲಿ 9 ದಿನಗಳ ವಿಶೇಷ ಪೂಜೆ, ಗುಟ್ಟಾಗಿ ಪೂಜೆ ನಡೆಸಲಾಗ್ತಿದೆ ಎಂದು ಸ್ಥಳೀಯರು ಹೇಳಿದ್ಯಾಕೆ..!?

ಕಂಗನಾ ರಣಾವತ್​ ಕೆನ್ನೆಗೆ ಬಾರಿಸಿದ ಮಹಿಳೆಗೆ ತಮಿಳುನಾಡಿನಿಂದ ​ಚಿನ್ನದ ಉಂಗುರ ಉಡುಗೊರೆ​..! ಇಲ್ಲಿದೆ ಸಂಪೂರ್ಣ ಮಾಹಿತಿ

ಬಸ್‌ ನಿಂದ ಕೆಳಗಿಳಿಸಿ ಪ್ರಯಾಣಿಕರ ಮೇಲೆ ಗುಂಡಿನ ದಾಳಿ..! ಭೀಕರ ದಾಳಿಯಲ್ಲಿ 23 ಜನ ಸಾವು..!