ನ್ಯೂಸ್ ನಾಟೌಟ್ : ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಗೂ ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ನಡೆದಿದೆ ಎನ್ನುವ ಆರೋಪ ಕೇಳಿಬಂದಿದ್ದು, ಇದೆಲ್ಲದರ ಹಿಂದೆ ಮಹಿಳಾ ಪೊಲೀಸ್ ಅಧಿಕಾರಿಯ ಕೈವಾಡವಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಈಗಾಗಲೇ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಸ್ನೇಹಮಯಿ ಕೃಷ್ಣ ಮೇಲೆ ಬೆಂಗಳೂರಿನ ಅಶೋಕ್ ನಗರದ ಸ್ಮಶಾನದಲ್ಲಿ ಇಬ್ಬರು ಆರೋಪಿಗಳು ಕಾಳಿಕಾಂಬ ಗುಡಿಯ ಅರ್ಚಕರಿಗೆ ವಿಚಾರ ತಿಳಿಸದೆ ಕುರಿಗಳನ್ನು ಬಲಿ ನೀಡಿ, ವಾಮಾಚಾರ ಮಾಡಿದ್ದಾರೆ ಎಂದು ಪೊಲೀಸರು ತನಿಖೆಯಲ್ಲಿ ತಿಳಿದುಬಂದಿತ್ತು.
ವಾಮಾಚಾರ ಪ್ರಕರಣದಲ್ಲಿ ಉಡುಪಿಯ ಮಹಿಳಾ ಸಬ್ ಇನ್ ಸ್ಪೆಕ್ಟರ್ ಹೆಸರು ಥಳುಕು ಹಾಕಿಕೊಂಡಿದೆ. ರಾಮಸೇನಾ ಮುಖಂಡ ಪ್ರಸಾದ್ ಅತ್ತಾವರ್ ಪತ್ನಿ ಸುಮಾ ನಂಟಿದೆ ಎಂದು ಹೇಳಲಾಗಿದೆ. ಮಹಿಳಾ ಪೊಲೀಸ್ ಅಧಿಕಾರಿ ನಂಟಿನ ಬಗ್ಗೆ ಖುದ್ದಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.