ನ್ಯೂಸ್ ನಾಟೌಟ್: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ಟಿಎಸ್ ಸಿ -2 ಪೊಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು 20 ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.
ಏನಿದು ಘಟನೆ..?
ಮೂಲ್ಕಿ ತಾಲೂಕು ಏಳಿಂಜೆ ನಿವಾಸಿ ರವಿ (35) ಶಿಕ್ಷೆಗೊಳಗಾದವನು. ಈತ 2023ರ ಜೂನ್‌ನಿಂದ ಡಿಸೆಂಬರ್ ವರೆಗೆ ಕಾರ್ಕಳ ತಾಲೂಕು ಇನ್ನಾ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಈ ವೇಳೆ ಆತನ ಗೆಳೆಯನ ಪುತ್ರಿ 17 ವರ್ಷದ ಬಾಲಕಿ ಪಿಯುಸಿ ವಿದ್ಯಾಭ್ಯಾಸಕ್ಕೆಂದು ಬಂದು ಆತನ ಮನೆಯಲ್ಲಿ ಉಳಿದುಕೊಂಡಿದ್ದಳು. ರವಿ ಆಕೆಯನ್ನು 2023ರ ನವೆಂಬರ್‌ನಲ್ಲಿ ಕಾರ್ಕಳ ತಾಲೂಕು ಇನ್ನಾದ ಗುಡ್ಡಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಅನಂತರ ಆತ 2023ರ ಡಿಸೆಂಬರ್‌ನಿಂದ ಏಳಿಂಜೆಯಲ್ಲಿ ವಾಸವಾಗಿದ್ದ. ಆಗಲೂ ಕೃತ್ಯ ಮುಂದುವರಿಸಿದ್ದ. ಪರಿಣಾಮವಾಗಿ ಬಾಲಕಿ ಗರ್ಭಧರಿಸಿದ್ದಳು. ಆರೋಪಿಯ ವಿರುದ್ಧ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಧೀಶರು ಅಪರಾಧಿಗೆ ಪೊಕೊÕà ಕಾಯಿದೆಯ ಕಲಂ 6 ಮತ್ತು ಐಪಿಸಿ 376(3) ಹಾಗೂ 376(2)(ಎಫ್)(ಎನ್) ಅಡಿಯಲ್ಲಿ 20 ವರ್ಷ ಕಠಿನ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದರೆ 4 ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ದಂಡದ ಮೊತ್ತವನ್ನು ಬಾಲಕಿಗೆ ನೀಡುವಂತೆ ಹಾಗೂ ಕಾನೂನು ಸೇವಾ ಪ್ರಾಧಿಕಾರದಿಂದ 6.50 ಲ.ರೂ. ಪರಿಹಾರವನ್ನು ಬಾಲಕಿಗೆ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.