Latestಕರಾವಳಿಕ್ರೈಂದಕ್ಷಿಣ ಕನ್ನಡಮಂಗಳೂರುರಾಜ್ಯವೈರಲ್ ನ್ಯೂಸ್

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಆರೋಪಿ ಮೇಲೆ ಜೈಲಲ್ಲೇ ಸಹ ಕೈದಿಗಳಿಂದ ದಾಳಿ..! ಮೈಸೂರು ಕಾರಾಗೃಹಕ್ಕೆ ಶಿಫ್ಟ್‌..?

793

ನ್ಯೂಸ್ ನಾಟೌಟ್: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಪ್ರಮುಖ ಆರೋಪಿ ಚೊಟ್ಟೆ ನೌಷಾದ್ ಮೇಲೆ ಬಿ ಬ್ಯಾರಕ್‌ ನ ಹಲವು ಸಹ ಕೈದಿಗಳಿಂದ ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ಅಟ್ಯಾಕ್​​ ಮಾಡಿರುವಂತಹ ಘಟನೆ ಮಂಗಳೂರು ಸೆಂಟ್ರಲ್‌ ಜೈಲಿನಲ್ಲಿ ನಿನ್ನೆ (ಮೇ.19) ನಡೆದಿದೆ. ಅದೃಷ್ಟವಶಾತ್ ನೌಷಾದ್ ಪಾರಾಗಿದ್ದಾನೆ ಎನ್ನಲಾಗಿದೆ.

ಆರೋಪಿ ಚೊಟ್ಟೆ ನೌಷಾದ್ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾಗಿತ್ತು. ಹಾಗಾಗಿ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಮೈಸೂರು ಕಾರಾಗೃಹಕ್ಕೆ ಶಿಫ್ಟ್‌ ಮಾಡಲು ಸಿದ್ಧತೆ ನಡೆಸಿದ್ದರು. ಈ ಮಧ್ಯೆ ನೌಷಾದ್, ಮಂಗಳೂರು ಜೈಲಿನಲ್ಲಿ ಯಾರನ್ನೋ ನೋಡಬೇಕು ಎಂದಿದ್ದ. ಹಾಗಾಗಿ ಜೈಲಿನಲ್ಲಿ ಮತ್ತೋರ್ವ ಕೈದಿ ಭೇಟಿಗಾಗಿ ಪೊಲೀಸರು ಕರೆದುಕೊಂಡು ಬಂದಿದ್ದರು. ಈ ವೇಳೆ ಇದ್ದಕಿದ್ದಂತೆ ನೌಷಾದ್ ಮೇಲೆ ಸಹ ಕೈದಿಗಳು ಅಟ್ಯಾಕ್‌ ಮಾಡಿದ್ದಾರೆ.

ಆರೋಪಿ ನೌಷದ್ ಅಲಿಯಾಸ್​ ವಾಮಂಜೂರು ನೌಷದ್ ಅಲಿಯಾಸ್​ ಚೊಟ್ಟೆ ನೌಷದ್, ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ. ಇತನ ವಿರುದ್ಧ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ಇವೆ.

ಮಂಗಳೂರಿನ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಪೈಕಿ ಇವನು ಒಬ್ಬನಾಗಿದ್ದು, ಇತ್ತೀಚೆಗೆ ಪೊಲೀಸರು ಅರೆಸ್ಟ್ ಮಾಡಿದ್ದರು. ಆರೋಪಿ ನೌಷದ್ ಉಳಿದ ಆರೋಪಿಗಳೊಂದಿಗೆ ಸೇರಿ ಸುಹಾಸ್‌ ಶೆಟ್ಟಿ ಕೊಲೆಗೆ ಸಂಚು ರೂಪಿಸಿದ್ದ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿತ್ತು.
ಸುಹಾಸ್‌ ಶೆಟ್ಟಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ 8 ಆರೋಪಿಗಳನ್ನ ಬಂಧಿಸಲಾಗಿತ್ತು. ಒಟ್ಟು 10 ಆರೋಪಿಗಳು ಭಾಗಿಯಾಗಿದ್ದು, ಇಬ್ಬರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದರು.

ಪತಿಯನ್ನು ಕೊಂದು ಪಕ್ಕದ ಮನೆಯವನ ಮೇಲೆ ದೂರು ಹಾಕಿದ್ದ ಮಹಿಳೆ ಅರೆಸ್ಟ್..! ಆಕೆಗೆ ಬೆಂಬಲವಾಗಿ ಗ್ರಾಮಸ್ಥರು ಮತ್ತು ಪಕ್ಷದ ಸದಸ್ಯರಿಂದ ಕೂಡ ಪ್ರತಿಭಟನೆ..!

ಚಲಿಸುತ್ತಿರುವ ರೈಲನ್ನು ಹತ್ತುವ ಭರದಲ್ಲಿ ಬಾಗಿಲಲ್ಲಿ ನಿಂತಿದ್ದ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ..! ಸ್ವಲ್ಪದರಲ್ಲಿ ಪಾರಾದ ವ್ಯಕ್ತಿಯ ವಿಡಿಯೋ ವೈರಲ್

See also  ಉಪ್ಪಿನಂಗಡಿ/ಪದ್ಮುಂಜ:ಕಲಿಕೆಯಲ್ಲಿ ಹಿಂದುಳಿದಿದ್ದಾರೆಂದು ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಬರೆಯಲು ಬಿಡದ ಶಿಕ್ಷಕರು!!100 ಪರ್ಸೆಂಟ್ ಫಲಿತಾಂಶ ಉದ್ದೇಶದಿಂದ ಮಕ್ಕಳ ಭವಿಷ್ಯದ ಜತೆ ಚೆಲ್ಲಾಟ!
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget