ಕರಾವಳಿ

ಚಾರಣಿಗರೇ ಗಮನಿಸಿ,ಕುಮಾರಪರ್ವತ ಚಾರಣಕ್ಕೆ ಮತ್ತೆ ಅವಕಾಶ,ಅರಣ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದೇನು?

ನ್ಯೂಸ್ ನಾಟೌಟ್ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣ ಇಂದಿನಿಂದ(ಅ. 7) ಆರಂಭಗೊಳ್ಳಲಿದೆ. ಇದೀಗ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ಚಾರಣಕ್ಕೆ ಅವಕಾಶ ಒದಗಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪವಿತ್ರ ತೀರ್ಥ ಕ್ಷೇತ್ರಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕೂಡ ಒಂದು. ಹೀಗಾಗಿ ಈ ದೇಗುಲಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ.ಅದರಲ್ಲೂ ಶನಿವಾರ ಭಾನುವಾರದಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.

ಇದರ ಜತೆಗೆ ಕುಮಾರ ಪರ್ವತ ಚಾರಣಕ್ಕೂ ಬರುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಭಾರೀ ಮಳೆಯಿಂದಾಗಿ ಇಂತಹ ಸ್ಥಳಗಳಿಗೆ ಭೇಟಿ ನೀಡಿದಾಗ ಬಹಳ ಎಚ್ಚರದಿಂದ ಇರಬೇಕಾಗುತ್ತದೆ ಎಂಬ ಹಿತ ದೃಷ್ಟಿಯಿಂದ ಕುಮಾರಪರ್ವತ ಚಾರಣವನ್ನು ಅ.3ರಿಂದ ನಿಷೇಧಿಸಲಾಗಿತ್ತು. ಅದಕ್ಕಿಂತ ಮೊದಲು ಮೇ ತಿಂಗಳಿನಿಂದ ಸೆ.29ರ ತನಕ ಅರಣ್ಯ ಇಲಾಖೆಯು ಬಿರು ಬೇಸಗೆ ಮತ್ತು ಅಧಿಕ ಮಳೆಯ ಕಾರಣದಿಂದಾಗಿ ನಿರ್ಬಂಧ ವಿಧಿಸಿತ್ತು. ಆ ಬಳಿಕ ಸೆ. 30ರಿಂದ ನಿರ್ಬಂಧ ತೆರವುಗೊಳಿಸಿ ಚಾರಣಕ್ಕೆ ಅವಕಾಶ ನೀಡಿತ್ತು.

ಕುಮಾರಪರ್ವತ ಚಾರಣ ಮತ್ತೆ ಆರಂಭಗೊಳ್ಳಲಿರುವುದರಿಂದ ಪರ್ವತದ ದಾರಿಯಲ್ಲಿ ಮತ್ತು ಪರ್ವತದಲ್ಲಿ ಸ್ವಚ್ಛತೆ ಕಾಪಾಡಲು ವಿಶೇಷ ವ್ಯವಸ್ಥೆಯನ್ನು ಇಲಾಖೆ ಮಾಡಿದೆ, ಜತೆಗೆ ಸ್ವಚ್ಛತೆ ಕಾಪಾಡುವಂತೆ ಮನವಿ ಮಾಡಿದೆ.

Related posts

ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನದ ಆಚರಣೆ

ಓಮ್ನಿ ಕಾರು -ಪಲ್ಸರ್ ಬೈಕ್ ಅಪಘಾತ-ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಗೌಡ್ರು!

ಉಡುಪಿ: ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ತಿರುವು! ಧ್ವನಿ ಎತ್ತಿದ ವಿದ್ಯಾರ್ಥಿನಿಗೆ ಬೆದರಿಕೆ ಸಂದೇಶ ಕಳಿಸಿದ್ಯಾರು?