Latestಕರಾವಳಿಕ್ರೈಂಮಂಗಳೂರುರಾಜ್ಯ

ಮಂಗಳೂರು: ಸೆಮಿನಾರ್​ ತಪ್ಪಿಸಲು ಕಾಲೇಜು ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ್ದ​ ವಿದ್ಯಾರ್ಥಿನಿ..! ಬಳಿಕ ಆಕೆಯೇ ದೂರು ನೀಡಿದ್ದಳು..!

482
Pc Cr : tV 9 KANNADA

ನ್ಯೂಸ್ ನಾಟೌಟ್: ಸೆಮಿನಾರ್​ ತಪ್ಪಿಸಲು ವಿದ್ಯಾರ್ಥಿನಿ ತಾನು ವ್ಯಾಸಂಗ ಮಾಡುತ್ತಿರುವ ವೈದ್ಯಕೀಯ ಕಾಲೇಜಿನಲ್ಲಿ ಬಾಂಬ್​ ಇದೆ ಎಂದು ಹುಸಿ ಬೆದರಿಕೆ ಕರೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ವಿದ್ಯಾರ್ಥಿನಿ ಡಾ.ಚಲಸಾನಿ ಮೋನಿಕಾ ಚೌಧರಿಯನ್ನು ಬಂಧಿಸಿದ್ದಾರೆ.

ಡಾ.ಚಲಸಾನಿ ಮೋನಿಕಾ ಚೌಧರಿ ಜೂ.4 ರಂದು ಸೆಮಿನಾರ್ ಕೊಡಬೇಕಿತ್ತು. ಆದರೆ, ಈ ಸಮಿನಾರ್ ​ನಿಂದ ತಪ್ಪಿಸಿಕೊಳ್ಳಲು ಮೋನಿಕಾ ಜೂನ್ 4ರ ಬೆಳಗ್ಗೆ 8.15ಕ್ಕೆ ತಾನು ಓದುತ್ತಿರುವ ಕಣಚೂರು ಮೆಡಿಕಲ್ ಕಾಲೇಜಿನ ಹೆರಿಗೆ ವಾರ್ಡ್ ಗೆ ‘ಲ್ಯಾಂಡ್ ಲೈನ್’ ನಿಂದ ದೂರವಾಣಿ ಕರೆ ಮಾಡಿ, “ಬೆಳಗ್ಗೆ 11ಕ್ಕೆ ಕಣಚೂರು ಆಸ್ಪತ್ರೆ ಸ್ಫೋಟಿಸುವುದಾಗಿ” ಬೆದರಿಕೆ ಹಾಕಿದ್ದಾರೆ.

ಮೋನಿಕಾ ಚೌಧರಿಯೇ ನಮ್ಮ ಕಾಲೇಜಿಗೆ ಬಾಂಬ್​ ಬೆದರಿಕೆ ಕರೆ ಬಂದಿದೆ ಎಂದು ಉಳ್ಳಾಲ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದಾರೆ.

ತನಿಖೆ ವೇಳೆ ತಾಂತ್ರಿಕ ವಿಶ್ಲೇಷಣೆ ನಡೆಸಿದಾಗ, ದೂರು ನೀಡಿದ ವಿದ್ಯಾರ್ಥಿನಿ ಡಾ.ಚಲಸಾನಿ ಮೋನಿಕಾ ಚೌಧರಿಯೇ ಬಾಂಬ್​ ಬೆದರಿಕೆ ಹಾಕಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸರು ಡಾ.ಚಲಸಾನಿ ಮೋನಿಕಾ ಚೌಧರಿಯನ್ನು ಬಂಧಿಸಿದ್ದಾರೆ. ಮೋನಿಕಾ ಚೌಧರಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ, ಹುಸಿ ಬಾಂಬ್​ ಬೆದರಿಕೆ ಕರೆ ಮಾಡಿರುವ ಹಿಂದಿನ ಕಾರಣ ಗೊತ್ತಾಗಿದೆ.  

10 ರೂಪಾಯಿಗೆ ಚಿಕಿತ್ಸೆ ನೀಡುತ್ತಿದ್ದ ಖ್ಯಾತ ವೈದ್ಯ ಇನ್ನಿಲ್ಲ..! 65,000ಕ್ಕೂ ಹೆಚ್ಚು ಯಶಸ್ವಿ ಹೆರಿಗೆ ಮಾಡಿಸಿದ್ದ ವೈದ್ಯ..!

RCB ಗೆದ್ದಿದ್ದಕ್ಕೆ 2 ಕ್ವಿಂಟಲ್ ಚಿಕನ್ ಮಾಡಿಸಿ ಇಡೀ ಊರಿಗೆ ಬಾಡೂಟ ಹಾಕಿಸಿದ ಯುವಕರು..! ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರಿಗೂ ಶ್ರದ್ಧಾಂಜಲಿ..!

See also  ನಡುರಸ್ತೆಯಲ್ಲಿ ವ್ಯಕ್ತಿಗೆ ಥಳಿಸಿದ ಮಂಗಳಮುಖಿಯರು..! ವಿಡಿಯೋ ವೈರಲ್ ಆದ ಬಳಿಕ ಪ್ರತಿಕ್ರಿಯಿಸಿದ ಪೊಲೀಸ್
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget