ಕರಾವಳಿಕ್ರೈಂ

ಮಂಗಳೂರು: ನಕಲಿ ಪೊಲೀಸ್ ಅಧಿಕಾರಿಯನ್ನು ಬಂಧಿಸಿದ ಪೊಲೀಸರು! ಯಾರೀತ ಕಾಲೇಜು ವಿದ್ಯಾರ್ಥಿ?

92
Spread the love

ನ್ಯೂಸ್ ನಾಟೌಟ್: ಪೊಲೀಸ್ ಅಧಿಕಾರಿ ಎಂದು ಬಿಂಬಿಸಿ ವಂಚಿಸಲು ಯತ್ನಿಸಿದ ನಗರದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬನನ್ನು ಮಂಗಳೂರು ಉರ್ವ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಕೇರಳದ ಇಡುಕ್ಕಿಯ ಬೆನೆಡಿಕ್ಟ್ ಸಾಬೂ (25) ಬಂಧಿತ ಆರೋಪಿಯಾಗಿದ್ದಾನೆ. ಈತ ನಗರದ ನರ್ಸಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೇರಳದ ‘ರಾ’ ಅಧಿಕಾರಿ ಎಂದು ಈತ ನಂಬಿಸಿ ವಂಚಿಸಲು ಯತ್ನಿಸಿದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿಯಿಂದ ಅಗ್ರಿಕಲ್ಚರ್ ಹಾಗೂ ಫಾರ್ಮರ್ಸ್ ವೆಲ್ಫೇರ್ ಡಿಪಾರ್ಟೆಂಟ್‌ಮೆಂಟ್ ಕೇರಳ ಎಂಬ ನಕಲಿ ಐಡಿ, ಪಿಎಸ್ಸೈ ಸಮವಸ್ತ್ರ, ಪೊಲೀಸ್ ಶೂಸ್, ಲೋಗೋ, ಮೆಡಲ್, ಬೆಲ್ಟ್, ಕ್ಯಾಪ್, 1 ಲ್ಯಾಪ್‌ಟಾಪ್, 2 ಮೊಬೈಲ್ ವಶಪಡಿಸಲಾಗಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ವರದಿ ತಿಳಿಸಿದೆ.

See also  ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ಹಿನ್ನೆಲೆ, ಚಕ್ರವರ್ತಿ ಸೂಲಿಬೆಲೆ ವಿರುದ್ಧ ಜಾರಿಯಾಗಿದ್ದ ಸಮನ್ಸ್‌ಗೆ ಹೈಕೋರ್ಟ್‌ ತಡೆ
  Ad Widget   Ad Widget   Ad Widget   Ad Widget   Ad Widget   Ad Widget