ಕರಾವಳಿಕ್ರೈಂಮಹಿಳೆ-ಆರೋಗ್ಯ

ಮಂಗಳೂರು: 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ..! ಆಹಾರದ ಸ್ಯಾಂಪಲ್ ತಪಾಸಣೆ ಕೊಂಡೊಯ್ದ ಅಧಿಕಾರಿಗಳು

163

ನ್ಯೂಸ್ ನಾಟೌಟ್: ಮಂಗಳೂರಿನ ಹೊರವಲಯದಲ್ಲಿರುವ ಇಂಜಿನಿಯರಿಂಗ್ ಕಾಲೇಜೊಂದರ ಮೂವತ್ತಕ್ಕೂ ಅಧಿಕ ವಿದ್ಯಾರ್ಥಿಗಳು ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ.

ನಗರದ ನಾನಾ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರಿನ ಹೊರವಲಯದ ಕಾಲೇಜಿನ ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ ವಿದ್ಯಾರ್ಥಿಗಳು ಭೇದಿ, ಹೊಟ್ಟೆ ನೋವಿನಿಂದ ಅಸ್ಬಸ್ಥರಾಗಿದ್ದಾರೆ.

ಅವರನ್ನು ಕೂಡಲೇ ಆಸ್ಪತ್ರೆಗಳಿಗೆ ದಾಖಲಿಸಲಾಯಿತು. ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ 35 ವಿದ್ಯಾರ್ಥಿಗಳು ಭೇದಿ, ಹೊಟ್ಟೆನೋವಿನಿಂದ ಅಸ್ವಸ್ಥರಾಗಿದ್ದಾರೆ. ಅಲ್ಲಿಗೆ ನಾನು ತಂಡದೊಂದಿಗೆ ಹೋಗಿ ಪರಿಶೀಲನೆ ನಡೆಸಿದ್ದೇನೆ. ಆಹಾರದ ಸ್ಯಾಂಪಲ್ ಗಳನ್ನು ಪ್ರಯೋಗಾಲಯಕ್ಕೆ‌ ಕಳುಹಿಸಲಾಗಿದೆ. ಅಸ್ವಸ್ಥರಾದ ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

See also  ಬಂಟ್ವಾಳ: ಹಿಂದೂ - ಮುಸ್ಲಿಮರ ಭಾವೈಕ್ಯತೆಗೆ ಸಾಕ್ಷಿಯಾದ ಮಸೀದಿ! ನವೀಕರಣಕ್ಕೆ ಹಿಂದೂಗಳಿಂದ ಮರದ ಕೊಡುಗೆ!
  Ad Widget   Ad Widget   Ad Widget   Ad Widget   Ad Widget   Ad Widget   Ad Widget