ಕರಾವಳಿಕ್ರೈಂವಿಡಿಯೋವೈರಲ್ ನ್ಯೂಸ್

ಮಂಗಳೂರು : ಬೈಕ್ ಸವಾರರ ಮೇಲೆ ಹರಿದ ಖಾಸಗಿ ಬಸ್‌! ಮುಂದೇನಾಯ್ತು? ಇಲ್ಲಿದೆ ಭೀಕರ ವಿಡಿಯೋ

286

ನ್ಯೂಸ್ ನಾಟೌಟ್ : ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ನ ಅತೀಯಾದ ವೇಗಕ್ಕೆ ನಿಯಂತ್ರಣ ತಪ್ಪಿದ ಬಸ್ ಬೈಕ್ ಸವಾರರ ಮೇಲೆ ಹರಿದ ಘಟನೆ ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ 66ರ ಹೊಸಬೆಟ್ಟು ಎಂಬಲ್ಲಿ ನಡೆದಿದೆ.

ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅಪಘಾತದ ಭೀಕರತೆಯ ವಿಡಿಯೋದಲ್ಲಿ ಸೆರೆಯಾಗಿದೆ.

ಹಳೆಯಂಗಡಿ ಇಂದಿರಾ ನಗರ ನಿವಾಸಿ‌ ಮುಹಮ್ಮದ್ ಸಾಹಿಲ್ ಹಾಗೂ ಪಕ್ಷಿಕೆರೆ ಹೊಸಕಾಡು ನಿವಾಸಿ ಅರಾಫತ್ ಗಾಯಾಳುಗಳು ಎನ್ನಲಾಗಿದ್ದು, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಎಂಬಲ್ಲಿ ಅತಿಯಾದ ವೇಗದಿಂದ ನುಗ್ಗಿದ ಮಂಗಳೂರು – ಉಡುಪಿ ಎಕೆಎಂಎಸ್ ಎಕ್ಸ್‌ಪ್ರೆಸ್‌ ಬಸ್ ರಸ್ತೆ ಬದಿ ನಿಂತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ನಿಂತಿದೆ ಎಂದು ವರದಿ ತಿಳಿಸಿದೆ.

ಡಿಕ್ಕಿಯ ಹೊಡೆತಕ್ಕೆ ಯುವಕರು ರಸ್ತೆಗೆ ಎಸೆಯಲ್ಪಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಗಾಯಾಳುಗಳನ್ನು ನಗರದ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಯ ವಿಡಿಯೋ ಇದೀಗ ವೈರಲ್ ಆಗಿದೆ. ಸಾರ್ವಜನಿಕರು ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ಗಳ ಅವಾಂತರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ‌. ಈ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಸುಳ್ಯ -ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget