ಕರಾವಳಿಕ್ರೈಂಪುತ್ತೂರುವೈರಲ್ ನ್ಯೂಸ್

ಮಂಗಳೂರಿನ ವಿದ್ಯಾರ್ಥಿನಿ ನಾಪತ್ತೆ ಕೇಸ್ ಗೆ ಟ್ವಿಸ್ಟ್..! ಪುತ್ತೂರಿನ ಮುಸ್ಲಿಂ ಯುವಕ ರೂಂ ಗೆ ಬರುತ್ತಿದ್ದ ಎಂದು ಆರೋಪ..! ಸ್ಕೂಟರ್‌ ಸುರತ್ಕಲ್‌ ಬಳಿ ಪತ್ತೆ!

234

ನ್ಯೂಸ್ ನಾಟೌಟ್: ಮಂಗಳೂರಿನ ದೇರಳಕಟ್ಟೆಯ ಪಿಎಚ್‌ಡಿ ಮಾಡುತ್ತಿದ್ದ ವಿದ್ಯಾರ್ಥಿನಿ ಎಂಟು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಲವ್‌ ಜಿಹಾದ್‌ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಮಧ್ಯೆ, ನಾಪತ್ತೆ ಪ್ರಕರಣ ದಾಖಲಾಗಿ 8 ದಿನಗಳ ಬಳಿಕ, ಭಾನುವಾರ ವಿದ್ಯಾರ್ಥಿನಿ ಬಳಸುತ್ತಿದ್ದ ಆಕ್ಟಿವಾ ಸ್ಕೂಟರ್‌ ಸುರತ್ಕಲ್‌ ಬಳಿ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.

ಪುತ್ತೂರು ನಿವಾಸಿ ದಿ.ಸತೀಶ್‌ ಹೆಬ್ಬಾರ್‌ ಪುತ್ರಿ ಚೈತ್ರಾ ಹೆಬ್ಬಾರ್‌ (27) ನಾಪತ್ತೆಯಾದವರು ಎಂದು ಗುರುತಿಸಲಾಗಿದ್ದು. ಕೋಟೆಕಾರು ಮಾಡೂರು ಬಳಿ ಪಿಜಿಯಲ್ಲಿ ನೆಲೆಸಿದ್ದ ಈಕೆ ಎಂಎಸ್ಸಿ ಬಳಿಕ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಫುಡ್‌ ಸೆಕ್ಯುರಿಟಿ ವಿಭಾಗದಲ್ಲಿ ಪಿಎಚ್‌ಡಿ ಮಾಡುತ್ತಿದ್ದರು. ಫೆ.17ರಂದು ಪಿಜಿಯಿಂದ ಹೊರಹೋದಾಕೆ ಕಾಲೇಜಿಗೂ ತೆರಳದೆ ನಾಪತ್ತೆಯಾಗಿದ್ದರು ಎನ್ನಲಾಗಿದೆ.

ಪುತ್ತೂರು ಮೂಲದ ಮುಸ್ಲಿಂ ಯುವಕ ಮಾಡೂರಿನಲ್ಲಿರುವ ಈ ಪಿಜಿಗೆ ಆಗಾಗ ಬಂದು ಹೋಗುತ್ತಿದ್ದ. 10 ದಿನಗಳ ಹಿಂದೆ ಸ್ಥಳೀಯರು ಈ ಸಂಗತಿಯನ್ನು ಬಜರಂಗದಳದ ಗಮನಕ್ಕೆ ತಂದಿದ್ದರು. ಪಿಜಿಯಲ್ಲಿ ವಿಚಾರಿಸಿದಾಗ ಹಿಂದೂ ವಿದ್ಯಾರ್ಥಿನಿಯರು ಇರುತ್ತಿದ್ದ ಪಿಜಿಯಲ್ಲಿ ಆತನೂ ಉಳಿಯುತ್ತಿದ್ದ ಎಂಬ ಸಂಗತಿ ಬಯಲಾಗಿತ್ತು ಎಂದು ಬಜರಂಗದಳ ದೂರಿದೆ. ಈ ಕುರಿತು ಆಕೆಯ ಚಿಕ್ಕಪ್ಪ ಪ್ರಕಾಶ್‌ ಹೆಬ್ಬಾರ್‌, ಉಳ್ಳಾಲ ಪೊಲೀಸ್‌ ಠಾಣೆ(Ullal police station)ಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.

ನಾಪತ್ತೆಯಾಗಿ 8 ದಿನಗಳು ಕಳೆದ ಬಳಿಕ ಭಾನುವಾರ ಸುರತ್ಕಲ್‌ ಸಮೀಪ ಚೈತ್ರಾ ಉಪಯೋಗಿಸುತ್ತಿದ್ದ ಆಕ್ಟಿವಾ ಸ್ಕೂಟರ್‌ ಪತ್ತೆಯಾಗಿದೆ. ಆ ಯುವಕ ಡ್ರಗ್‌ ಪೆಡ್ಲರ್‌ ಆಗಿರುವ ಸಂಶಯದಿಂದ ಚೈತ್ರಾಳ ದೊಡ್ಡಪ್ಪನನ್ನು ಸಂಪರ್ಕಿಸಿ ಮಾಹಿತಿ ನೀಡಲಾಗಿತ್ತು. ದೊಡ್ಡಪ್ಪ ಈ ಬಗ್ಗೆ ಯುವತಿಯ ವಿಚಾರಣೆ ನಡೆಸಿದ ಮರುದಿನ, ಫೆ.17 ರಂದು ಚೈತ್ರಾ ದಿಢೀರ್‌ ನಾಪತ್ತೆಯಾಗಿದ್ದಾಳೆ. ಆ ಯುವಕನೇ ಚೈತ್ರಾಳನ್ನು ಅಪಹರಿಸಿರುವ ಸಾಧ್ಯತೆಯಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಲವ್ ಜಿಹಾದ್ ಮಾಡಲಾಗಿದೆ ಎಂದು ಬಜರಂಗದಳ ಉಳ್ಳಾಲ ಪ್ರಖಂಡ ಸಂಚಾಲಕ ಅರ್ಜುನ್‌ ಮಾಡೂರು, ಈ ಯುವಕನೇ ಆಕೆಯನ್ನು ಅಪಹರಿಸಿರುವ ಸಾಧ್ಯತೆಯಿದೆ ಎಂದೂ ಆರೋಪಿಸಿದ್ದಾರೆ.

See also  ಧರ್ಮಸ್ಥಳದಿಂದ ಸೌತಡ್ಕ ಗಣಪತಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಅಪಘಾತ, ಹಲವರಿಗೆ ಗಾಯ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget