ಕರಾವಳಿಕ್ರೈಂದಕ್ಷಿಣ ಕನ್ನಡಮಂಗಳೂರುವೈರಲ್ ನ್ಯೂಸ್

ಮಂಗಳೂರು: ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ..! ಚುನಾವಣಾ ಆಯೋಗದಿಂದ ನೋಟಿಸ್​

254

ನ್ಯೂಸ್ ನಾಟೌಟ್: ಮಂಗಳೂರಿನಲ್ಲಿ ರಂಜಾನ್​ ಆಚರಣೆ ವೇಳೆ ರೋಜಾ ಪ್ರಯುಕ್ತ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ವ್ಯವಸ್ಥೆ ಆಯೋಜಿಸಿದ್ದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಸಾರ್ವಜನಿಕ ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಅಬೂಬಕರ್ ಸಿದ್ದಿಕಿಗೆ ಚುನಾವಣಾ ಆಯೋಗ ತುರ್ತು ನೋಟಿಸ್ ನೀಡಿದೆ ಎನ್ನಲಾಗಿದೆ.

ಮಂಗಳೂರು ಹೊರವಲಯ (Mangalore) ಮುಡಿಪುವಿನಲ್ಲಿ ರಸ್ತೆಯಲ್ಲಿ ಆಟೋ ಚಾಲಕರಿಗಾಗಿ ಈ ಇಫ್ತಾರ್ ಕೂಟ ಆಯೋಜನೆಗೊಂಡಿತ್ತು. ಇಫ್ತಾರ್ ಕೂಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ಕುರಿತು ವ್ಯಾಪಕವಾಗಿ ಭಾರೀ ಪರ ಮತ್ತು ವಿರೋಧ ಚರ್ಚೆ ನಡೆದಿತ್ತು. ಇದೀಗ ಇಫ್ತಾರ್ ಕೂಟದಲ್ಲಿ ರಸ್ತೆ ಬಂದ್ ಮಾಡಿ ಸಂಚಾರಕ್ಕೆ ಅಡ್ಡಿಪಡಿಸಿದ್ದೀರಿ ಎಂದು ಚುನಾವಣಾ ಆಯೋಗದಿಂದ ಆಯೋಜಕರಿಗೆ ನೋಟಿಸ್ ನೀಡಲಾಗಿದೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯೂ ಮಾಡಲಾಗಿದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

See also  ಹೊನ್ನಮ್ಮ ಕಡೋಡಿ ನಿಧನ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget