ಕರಾವಳಿಮಂಗಳೂರುವೈರಲ್ ನ್ಯೂಸ್ಸುಳ್ಯ

ಮಂಗಳೂರು: ಪ್ರಧಾನಿ ಮೋದಿಯನ್ನು ಸ್ವಾಗತಿಸಿದ್ದ ಪ್ರವೀಣ್ ನೆಟ್ಟಾರ್ ತಾಯಿ, ವೈರಲ್ ಆಗುತ್ತಿದೆ ಫೋಟೋ

167

ನ್ಯೂಸ್ ನಾಟೌಟ್: ಮಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರುವ ತಂಡದಲ್ಲಿ ದಿ. ಪ್ರವೀಣ್ ನೆಟ್ಟಾರ್ ಅವರ ತಾಯಿ ರತ್ನಾವತಿ ಶೇಖರ ಪೂಜಾರಿಯವರಿಗೆ ಅವಕಾಶ ದೊರಕಿತ್ತು ಅನ್ನೋದು ವಿಶೇಷ. ಪ್ರವೀಣ್ ನಿಂದಾಗಿ ಈ ಅವಕಾಶ ತನಗೆ ದೊರೆಯಿತು ಎಂದು ರತ್ನಾವತಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿಗಳಾದ ಕ್ಯಾಪ್ಟನ್ ಬೃಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಪರವಾಗಿ ರೋಡ್ ಶೋ ಗಾಗಿ ಮಂಗಳೂರಿಗೆ ಆಗಮಿಸಿದ್ದ ನರೇಂದ್ರ ಮೋದಿಗೆ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರುವ ತಂಡದಲ್ಲಿ ರತ್ನಾವತಿಯವರಿಗೂ ಅವಕಾಶ ನೀಡಲಾಗುವ ಕುರಿತು ಬಿಜೆಪಿ ಕಚೇರಿ ತಿಳಿಸಿದೆ. ಅದರಂತೆ ಪ್ರವೀಣ್ ನೆಟ್ಟಾರ್ ತಂದೆ ಶೇಖರ ಪೂಜಾರಿ, ತಾಯಿ ರತ್ನಾವತಿ ಹಾಗೂ ಸಹೋದರಿ ನಳಿನಿ ಮಂಗಳೂರಿಗೆ ತೆರಳಿದ್ದರು. ಭದ್ರತೆಯ ದೃಷ್ಟಿಯಿಂದ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಯನ್ನೂ ನಡೆಸಲಾಗಿತ್ತು ಎಂದು ವರದಿ ತಿಳಿಸಿದೆ.

See also  ಮಂಗಳೂರು: ಪೆಟ್ರೋಲ್ ಕಾರಿಗೆ ಡೀಸೆಲ್ ತುಂಬಿಸಿದ ಪೆಟ್ರೋಲ್ ಪಂಪ್ ಸಿಬ್ಬಂದಿ..! ಸಿಬ್ಬಂದಿ ಎಡವಟ್ಟಿಗೆ ಕಾರಿನ ಎಂಜಿನ್ ಸಂಪೂರ್ಣ ಸೀಜ್, ಗ್ರಾಹಕ ನ್ಯಾಯಾಲಯದ ಮೆಟ್ಟಿಲೇರಿದ ಕಾರಿನ ಮಾಲೀಕ
  Ad Widget   Ad Widget   Ad Widget   Ad Widget   Ad Widget   Ad Widget   Ad Widget