ಕರಾವಳಿಕ್ರೈಂ

ಮಂಗಳೂರು: ರೈಲ್ವೆ ಬೋಗಿಯ ಶೌಚಾಲಯದೊಳಗೆ ನೇಣು ಹಾಕಿಕೊಂಡ ವ್ಯಕ್ತಿ! ವಾರಸುದಾರರಿಗಾಗಿ ಹುಡುಕಾಟ!

ನ್ಯೂಸ್ ನಾಟೌಟ್: ಮಂಗಳೂರಿನ ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ರೈಲು ಬೋಗಿಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿರುವ ಅಪರಿಚಿತ ವ್ಯಕ್ತಿಯ ಶವ ರವಿವಾರ ಮಾರ್ಚ್ ೧೯ ರಂದು ಪತ್ತೆಯಾಗಿದೆ.

ರೈಲ್ವೇ ನಿಲ್ದಾಣದಲ್ಲಿ ನಿಂತಿದ್ದ ರೈಲುಗಾಡಿಯ ಡಿ3 ಬೋಗಿಯ ಶೌಚಾಲಯದಲ್ಲಿ ಅಪರಿಚಿತ ವ್ಯಕ್ತಿ ನೇಣು ಹಾಕಿಕೊಂಡಿದ್ದು, ಮೃತ ವ್ಯಕ್ತಿ 40-45 ವರ್ಷ ಪ್ರಾಯದವರಾಗಿದ್ದಾರೆ ಎಂದು ವರದಿ ತಿಳಿಸಿದೆ.

5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದು, ಸಿಮೆಂಟ್ ಬಣ್ಣದ ಜರ್ಸಿ, ಕೇಸರಿ ಬಣ್ಣದ ಟಿ-ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಅದರೊಳಗೆ ಕಪ್ಪು ಬಣ್ಣದ ಮಾಸಲು ಪ್ಯಾಂಟ್ ಧರಿಸಿದ್ದಾರೆ, ಜೊತೆಗೆ ಕುತ್ತಿಗೆಯಲ್ಲಿ ಮಣಿ ಸರವಿದೆ.

ಈ ಕುರಿತು ಮಂಗಳೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Related posts

ಪಂಜದಲ್ಲಿ ಮನೆಯೊಳೆಗೆ ಪತ್ತೆಯಾದ ಯುವಕನ ಶವ

40,000 ರೂ. ಗೆ 4 ವರ್ಷದ ಹೆಣ್ಣು ಮಗುವನ್ನು ಮಾರಿದ ಪೋಷಕರು..! 6 ಮಂದಿ ಅರೆಸ್ಟ್‌

ಅಂತ್ಯಕ್ರಿಯೆಗೆ ಜಾಗವಿಲ್ಲದೆ ನಡು ರಸ್ತೆಯಲ್ಲೇ ಶವ ಸಂಸ್ಕಾರ ಮಾಡಿದ್ರು..! ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದ ಕಿರಾತಕ ಯಾರು..?