Latestರಾಜಕೀಯರಾಜ್ಯ

ಮಾರ್ಚ್‌ 31ರ ನಂತರ ಎರಡು ಕಂತಿನ ‘ಗೃಹಲಕ್ಷ್ಮಿ’ ಹಣ ಬಿಡುಗಡೆ ಮಾಡುವುದಾಗಿ ಹೇಳಿದ ಲಕ್ಷ್ಮಿ ಹೆಬ್ಬಾಳ್ಕರ್, ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ

1.1k

ನ್ಯೂಸ್ ನಾಟೌಟ್: ‘ಮಾರ್ಚ್‌ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಇಲ್ಲಿ ಇಂದು(ಮಾ.23) ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಸಚಿವೆ, ‘ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ₹2 ಸಾವಿರ ಹೆಚ್ಚಿಸಿದ್ದೆವು. ಅದಾದ ನಂತರ ಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ.

ಈ ಬಜೆಟ್‌ ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ₹750, ಸಹಾಯಕಿಯರ ಗೌರವಧನವನ್ನು ₹500 ಹೆಚ್ಚಿಸಿ ಘೋಷಿಸಿದ್ದೇವೆ. ಅದನ್ನು ಜಾರಿಗೆ ತರುತ್ತೇವೆ’ ಎಂದರು.

ಸಚಿವ ಕೆ.ಎನ್‌.ರಾಜಣ್ಣಗೆ ಹನಿಟ್ರ್ಯಾಪ್ ಮಾಡಿರುವ ವಿಚಾರವಾಗಿ ‍ಪ್ರತಿಕ್ರಿಯಿಸಿದ ಹೆಬ್ಬಾಳಕರ, ‘ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿರುವುದು ದುರದೃಷ್ಟಕರ ಸಂಗತಿ. ಈ ಬಗ್ಗೆ ರಾಜಣ್ಣ ತಮಗಾದ ಅನುಭವವನ್ನು ಸದನದಲ್ಲಿ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಈಗಾಗಲೇ ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಆ ವಿಷಯ ನೋಡಿಕೊಳ್ಳುತ್ತಾರೆ. ಆ ಬಗ್ಗೆ ಹೆಚ್ಚು ಮಾತನಾಡಲ್ಲ’ ಎಂದರು.

ಇದನ್ನೂ ಓದಿ4 ವರ್ಷದ ಬಳಿಕ ನಟ ಸುಶಾಂತ್ ಸಿಂಗ್ ರಜಪೂತ್ ನ ಸಾವಿನ ವರದಿ ಕೋರ್ಟ್ ಗೆ ಸಲ್ಲಿಕೆ..! ಕಾಣದ ಕೈಗಳ ಕೈವಾಡದ ಬಗ್ಗೆ ಸಿಬಿಐ ಹೇಳಿದ್ದೇನು..?

See also  ಗಣೇಶ ಮೂರ್ತಿಯನ್ನಿರಿಸಿದ್ದ ಪೆಂಡಾಲ್ ನಲ್ಲಿ ದಿಢೀರ್ ಬೆಂಕಿ..! ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪ್ರಾರ್ಥಿಸುತ್ತಿದ್ದಾಗ ಘಟನೆ! ಮುಂದೇನಾಯ್ತು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget