ನ್ಯೂಸ್ ನಾಟೌಟ್: ಮಾರ್ಚ್ 7 ರಂದು 2025-26ನೇ ಸಾಲಿನ ಬಜೆಟ್ ಮಂಡಿಸೋದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ರೈತ ಮುಖಂಡರ ಜೊತೆ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಸಿಎಂ, ಮಾರ್ಚ್ 3 ರಿಂದ ಅಧಿವೇಶನ ಪ್ರಾರಂಭವಾಗಲಿದೆ. ಮಾರ್ಚ್ 3 ರಂದು ರಾಜ್ಯಪಾಲರು ಜಂಟಿ ಸದನವನ್ನ ಉದ್ದೇಶಿ ಮಾತನಾಡಲಿದ್ದಾರೆ. ಮಂಗಳವಾರ, ಬುಧವಾರ ಮತ್ತು ಗುರುವಾರ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಮಾರ್ಚ್ 7 ರಂದು ಬಜೆಟ್ ಮಂಡನೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಬಜೆಟ್ ಮಂಡಿಸಿದ ಬಳಿಕ ಅದರ ಮೇಲೆ ಚರ್ಚೆ ನಡೆದು ಮಾರ್ಚ್ ಕೊನೆಯಲ್ಲಿ ಉತ್ತರ ಕೊಡುತ್ತೇನೆ. ಅಧಿವೇಶನ ಎಷ್ಟು ದಿನ ನಡೆಯಬೇಕು ಅಂತ ವಿಧಾನಸಭೆ ಕಾರ್ಯಕಲಾಪ ಸಲಹಾ ಸಮಿತಿಯಲ್ಲಿ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.